Publish Date: Sun, 27 May 2018 (12:35 IST)
Updated Date: Sun, 27 May 2018 (12:37 IST)
ಬೆಂಗಳೂರು: ರೈತರ ಸಾಲಮನ್ನಾ ಮಾಡದಿದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಲೂ ಸಿದ್ಧ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ನಾನು ಸಿಎಂ ಕುರ್ಚಿಗೆ ಅಂಟಿ ಕುಳಿತಿಲ್ಲ. ರೈತರ ಸಾಲ ಮನ್ನಾ ಮಾಡಿದ್ದರೆ ನನ್ನ ಸ್ಥಾನಕ್ಕೆ ರಾಜೀನಾಮೆ ಕೊಡಲೂ ಹಿಂದೆ ಮುಂದೆ ನೋಡುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ನಾಳೆ ವಿಪಕ್ಷ ಬಿಜೆಪಿ ಇದೇ ವಿಚಾರಕ್ಕೆ ರಾಜ್ಯವ್ಯಾಪಿ ಬಂದ್ ಗೆ ಕರೆ ನೀಡಿದೆ.
ಈ ಹಿನ್ನಲೆಯಲ್ಲಿ ರೇಸ್ ಕೋರ್ಸ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ತಜ್ಞರೊಂದಿಗೆ ಸಭೆ ನಡೆಸುತ್ತಿರುವ ಸಿಎಂ ಸಾಲಮನ್ನಾ ಕುರಿತು ಚರ್ಚೆ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.
Krishnaveni K
Publish Date: Sun, 27 May 2018 (12:35 IST)
Updated Date: Sun, 27 May 2018 (12:37 IST)