ಬೆಂಗಳೂರು: ರಾಜ್ಯದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಇಂದು ನೂರು ದಿನಗಳನ್ನು ಪೂರೈಸಿದ್ದು, ಸಿಎಂ ಕುಮಾರಸ್ವಾಮಿ ಇಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಲಿದ್ದಾರೆ.
ಈ ಹಿನ್ನಲೆಯಲ್ಲಿ ಕುಮಾರಸ್ವಾಮಿ ಮತ್ತು ಡಿಸಿಎಂ ಪರಮೇಶ್ವರ್ ದೆಹಲಿಗೆ ತೆರಳಿದ್ದಾರೆ. ರಾಜ್ಯ ಸಮ್ಮಿಶ್ರ ಸರ್ಕಾರದ ಬಗ್ಗೆ ಕಾಂಗ್ರೆಸ್ ನ ಕೆಲವು ನಾಯಕರು ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿರುವುದರ ಬಗ್ಗೆ ಸಿಎಂ ಎಚ್ ಡಿಕೆ, ರಾಹುಲ್ ಗೆ ದೂರು ನೀಡುವ ಸಾಧ್ಯತೆಯಿದೆ.
ಅಲ್ಲದೆ, ಇನ್ನು ಕೆಲವೇ ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಆಗುವುದರಲ್ಲಿದ್ದು, ಅದರ ಬಗ್ಗೆಯೂ ಸಿಎಂ, ಡಿಸಿಎಂ, ರಾಹುಲ್ ಜತೆ ಚರ್ಚಿಸುವ ಸಾಧ್ಯತೆಯಿದೆ. ದೆಹಲಿ ಭೇಟಿ ವೇಳೆ ಸಿಎಂ ಎಚ್ ಡಿಕೆ ಪ್ರಧಾನಿ ಮೋದಿ ಭೇಟಿಯಾಗಿ ರಾಜ್ಯದ ನೆರೆ ಸಂಕಷ್ಟಕ್ಕೆ ಮತ್ತಷ್ಟು ಕೇಂದ್ರದ ನೆರವು ಕೋರುವ ಸಾಧ್ಯತೆಯಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.