ನವದೆಹಲಿ : ಮೂರು ದಿನಗಳಿಂದ ದೆಹಲಿ ಪ್ರವಾಸದಲ್ಲಿರುವ ಸಿಎಂ ಕುಮಾರಸ್ವಾಮಿ ಅವರು ಸೋಮವಾರ (ಇಂದು) ರಾಹುಲ್ ಗಾಂಧಿ ಅವರ ನಿವಾಸಕ್ಕೆ ತೆರಳಿ, ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು,’ ರಾಹುಲ್ ಅವರೊಂದಿಗೆ ಸೌಹಾರ್ದಯುತ ಮಾತುಕತೆಗಾಗಿ ಭೇಟಿಯಾಗಿದ್ದೇನೆ. ಈ ವೇಳೆ ರಾಜ್ಯದ ಅಭಿವೃದ್ಧಿಗೆ ಪೂರಕವಾದ ಹಲವು ಕ್ರಮಗಳ ಬಗ್ಗೆ ಚರ್ಚಿಸಿದ್ದು, ಅವರು ಪೂರಕವಾಗಿ ಸ್ಪಂದಿಸಿದ್ದಾರೆ’ ಎಂದು ತಿಳಿಸಿದ್ದಾರೆ.
ಈ ವೇಳೆ ಜೆಡಿಎಸ್ ಮುಖಂಡ ಡ್ಯಾನಿಸ್ ಅಲಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರು ಉಪಸ್ಥಿತರಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ