ಹೊಸದಿಲ್ಲಿ : ಸಂಸತ್ನ ಬಜೆಟ್ ಅಧಿವೇಶನಕ್ಕೂ ಮುನ್ನ ಆಘಾತ ಎದುರಾಗಿದೆ.
400ಕ್ಕೂ ಹೆಚ್ಚು ಸಂಸತ್ ಸಿಬ್ಬಂದಿಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಜನವರಿ 4 ರಿಂದ 8ರವರೆಗೆ ಸಂಸತ್ನ 1409 ಉದ್ಯೋಗಿಗಳು ಹಾಗೂ ಭದ್ರತಾ ಸಿಬ್ಬಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.
ಅವರಲ್ಲಿ 402 ಸಿಬ್ಬಂದಿಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ವರದಿಯಾಗಿದೆ. ಅವರ ಮಾದರಿಗಳನ್ನು ಓಮಿಕ್ರಾನ್ ಪರೀಕ್ಷೆಗಾಗಿ ಜಿನೋಮ್ ಸೀಕ್ವೆನ್ಸಿಂಗ್ಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ಜನವರಿ 4-8ರ ಅವಧಿಯಲ್ಲಿ ಸುಮಾರು 402 ಸಿಬ್ಬಂದಿ ಕೋವಿಡ್ 19 ಸೋಂಕಿಗೆ ಒಳಗಾಗಿದ್ದಾರೆ. ಎಲ್ಲ ಮಾದರಿಗಳನ್ನೂ ಓಮಿಕ್ರಾನ್ ತಳಿಯನ್ನು ದೃಢಪಡಿಸಿಕೊಳ್ಳಲು ಜಿನೋಮ್ ಸೀಕ್ವೆನ್ಸಿಂಗ್ಗೆ ಕಳುಹಿಸಲಾಗಿದೆ' ಎಂದು ಎಎನ್ಐ ಸುದ್ದಿಸಂಸ್ಥೆಗೆ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಸಂಸತ್ ಸಿಬ್ಬಂದಿ ವಿಭಾಗದ ಆಂತರಿಕ ಸಂದೇಶದಂತೆ, ಸರ್ಕಾರದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದು ಸಲಹೆ ನೀಡಲಾಗಿದೆ.