Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ರಾಜ್ಯ ಸರ್ಕಾರಿ ನೌಕರರಿಗೆ ಕಾಂಗ್ರೆಸ್ ಸರ್ಕಾರ ಸಿಹಿ ಸುದ್ದಿ

ರಾಜ್ಯ ಸರ್ಕಾರಿ ನೌಕರರಿಗೆ ಕಾಂಗ್ರೆಸ್ ಸರ್ಕಾರ ಸಿಹಿ ಸುದ್ದಿ
ಬೆಂಗಳೂರು , ಗುರುವಾರ, 1 ಜೂನ್ 2023 (08:38 IST)
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಕಾಂಗ್ರೆಸ್ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ತುಟ್ಟಿಭತ್ಯೆಯನ್ನು ಶೇ 4ಷ್ಟು ಹೆಚ್ಚಿಸಿ ಮಂಗಳವಾರ ಆದೇಶ ಹೊರಡಿಸಿದೆ.
 
ಪರಿಷ್ಕೃತ ತುಟ್ಟಿ ಭತ್ಯೆ 2023ರ ಜನವರಿ 1ರಿಂದಲೇ ಪೂರ್ವಾನ್ವಯವಾಗಲಿದೆ. 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ 2023 ರ ಜನವರಿ 1ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಹೆಚ್ಚಿಸಲಾಗಿದೆ.

ಮೂಲ ವೇತನದ ಶೇಕಡ 31 ರಿಂದ ಶೇಕಡ 35 ಕ್ಕೆ ಪರಿಷ್ಕರಿಸಿ ಮಂಜೂರು ಮಾಡಲು ಸೂಚಿಸಲಾಗಿದೆ ಎಂದು ಆರ್ಥಿಕ ಇಲಾಖೆಯ ಉಪ ಕಾರ್ಯದರ್ಶಿಯವರು ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ತುಟ್ಟಿಭತ್ಯೆಯ ಉದ್ದೇಶಕ್ಕಾಗಿ ಮೂಲ ವೇತನ ಮತ್ತು ಅದರಲ್ಲಿ ಸ್ಥಗಿತ ವೇತನ ಬಡ್ತಿ, ಇತರೆ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ ಅದು, ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ನೀಡಲಾಗಿದ್ದಲ್ಲಿ ಅವುಗಳು ಸೇರಿರುತ್ತವೆ ಎಂದು ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸುವಂತಿಲ್ಲ.

ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಸಹ 2023 ರ ಜನವರಿ 1ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಶೇಕಡ 35ಕ್ಕೆ ಹೆಚ್ಚಿಸಿ ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಒಂದೇ ವಾರದಲ್ಲಿ 2,000 ರೂ. ನೋಟುಗಳ 14,000 ಕೋಟಿ ಡೆಪಾಸಿಟ್ : ಆರ್‌ಬಿಐ