ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಹೋಗುತ್ತಾರಾ ಎಂಬ ಪ್ರಶ್ನೆಗಳಿಗೆ ಇದೀಗ ಉತ್ತರ ಸಿಕ್ಕಿದೆ.
ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಂಡ ಬಳಿಕ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಎರಡೂ ಪಕ್ಷಗಳೂ ಲೋಕಸಭೆ ಚುನಾವಣೆಯಲ್ಲೂ ಮೈತ್ರಿ ಮುಂದುವರಿಸಲು ನಿರ್ಧರಿಸಿರುವುದಾಗಿ ಹೇಳಿದ್ದಾರೆ.
ಈಗಾಗಲೇ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮತ್ತು ಸಿಎಂ ಕುಮಾರಸ್ವಾಮಿ ಪ್ರಧಾನಿ ಅಭ್ಯರ್ಥಿಯಾಗಿ ರಾಹುಲ್ ಗಾಂಧಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇದೀಗ ಮೈತ್ರಿ ಕುರಿತು ಹೇಳಿಕೆ ನೀಡಿರುವ ಸಿದ್ದರಾಮಯ್ಯ ಲೋಕಸಭೆ ಚುನಾವಣೆಗೆ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳುವುದಕ್ಕೆ ಯಾರದೂ ವಿರೋಧವಿಲ್ಲ ಎಂದಿದ್ದಾರೆ. ಸೀಟು ಹಂಚಿಕೆ ಹೊಂದಾಣಿಕೆ ಯಾವ ರೀತಿ ಇರಲಿದೆ ಎನ್ನುವುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.