Select Your Language

Notifications

webdunia
webdunia
webdunia
webdunia

ಅಥಣಿ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ಲಕ್ಷ್ಮಣ್ ಸವದಿಗೆ ಗೆಲುವು

ಅಥಣಿ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ಲಕ್ಷ್ಮಣ್ ಸವದಿಗೆ ಗೆಲುವು
ಬೆಳಗಾವಿ , ಶನಿವಾರ, 13 ಮೇ 2023 (12:44 IST)
ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
 
ಬೆಳಗಾವಿ ಜಿಲ್ಲೆಯ ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ಬಿಜೆಪಿ ನಾಯಕ ಮಹೇಶ್ ಈರನಗೌಡ ಕುಮಟಳ್ಳಿ ಶಾಸಕರಾಗಿದ್ದರು. 2018 ರಲ್ಲಿ ಕಾಂಗ್ರೆಸ್ ಟಿಕೆಟ್ನಲ್ಲಿ ಗೆದ್ದ ನಂತರ ಬಿಜೆಪಿಗೆ ಹಾರಿದ್ದ ಕಮಟಳ್ಳಿ 2019 ರ ಉಪಚುನಾವಣೆಯಲ್ಲಿ ಗೆದ್ದು ಬೀಗಿದ್ದರು.

ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹಾಗೂ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆದಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ವಿರಾಜಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಜಯ