ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಸೇರಿಕೊಂಡಿರು ರಚಿಸಿರುವ ಸಮ್ಮಿಶ್ರ ಸರ್ಕಾರದ ಆಯಸ್ಸು ಕಡಿಮೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆಎನ್ ರಾಜಣ್ಣ ಭವಿಷ್ಯ ನುಡಿದಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿ ಸಾರ್ವಜನಿಕವಾಗಿ ಕಣ್ಣೀರು ಹಾಕಿರುವುದು ನಾಚಿಕೆಗೇಡಿನ ಸಂಗತಿ. ನಮ್ಮ ರಾಜ್ಯದ ಮುಖ್ಯಮಂತ್ರಿ ಅಳುತ್ತಿರುವ ವಿಚಾರ ಸಂಸತ್ತಿನಲ್ಲೂ ಚರ್ಚೆಯಾಗಿದೆ. ಇದು ರಾಜ್ಯದ ಬೆಳವಣಿಗೆಗೆ ಒಳ್ಳೆಯದಲ್ಲ ಎಂದು ಅವರು ಹೇಳಿದ್ದಾರೆ.
ಅಲ್ಲದೆ, ಸಮ್ಮಿಶ್ರ ಸರ್ಕಾರ ಆಯಸ್ಸು ಕಡಿಮೆ. ಹೀಗಾಗಿ ಜೆಡಿಎಸ್ ಜತೆಗೆ ಮೈತ್ರಿ ಮಾಡಿಕೊಂಡು ತುಮಕೂರು ಸಂಸದೀಯ ಕ್ಷೇತ್ರವನ್ನು ಬಿಟ್ಟುಕೊಟ್ಟರೆ ನಾನು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕಾಗುತ್ತದೆ ಎಂದು ರಾಜಣ್ಣ ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.