ಬೆಂಗಳೂರು: ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾಗಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಐಎಎಸ್ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಅಸಮಾಧಾನ ಶುರುವಾಗಿದೆ ಎನ್ನಲಾಗಿದೆ.
ತಮ್ಮನ್ನು ಕೇಳದೇ ಜೆಡಿಎಸ್ ನಾಯಕರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡುತ್ತಿರುವುದು ಸರಿಯಲ್ಲ ಎಂದು ಕಾಂಗ್ರೆಸ್ ನ ವೀರಪ್ಪ ಮೊಯಿಲಿಯಂತಹ ಹಿರಿಯ ನಾಯಕರೇ ಅತೃಪ್ತಿ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ನ್ನು ಸಂಪರ್ಕಿಸದೇ ಜೆಡಿಎಸ್ ಸಚಿವರು ತಮಗಿಷ್ಟ ಬಂದ ಹಾಗೆ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿರುವುದು ಎಷ್ಟು ಸರಿ ಎಂದು ಈ ನಾಯಕರು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಹಿಂದೊಮ್ಮೆ ಸಚಿವ ಡಿಕೆ ಶಿವಕುಮಾರ್ ತಮ್ಮ ಇಲಾಖೆಯ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಸಚಿವ ಎಚ್ ಡಿ ರೇವಣ್ಣ ಮೂಗು ತೂರಿಸುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದು ಸುದ್ದಿಯಾಗಿತ್ತು. ಇದೀಗ ಮತ್ತೆ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಎರಡೂ ಪಕ್ಷಗಳ ನಡುವೆ ಒಡಕು ಮೂಡಿವೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.