Daily Horoscope
✕

ಬಿಜೆಪಿಗೆ ಸೇರ್ಪಡೆಗೊಂಡ ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ್!

Webdunia
ಸೋಮವಾರ, 9 ಏಪ್ರಿಲ್ 2018 (06:39 IST)
ನವದೆಹಲಿ : ಅಫಜಲ್ಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರು ಕಾಂಗ್ರೆಸ್ ತೊರೆದು ಭಾನುವಾರ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.


ಉತ್ತರ ಕರ್ನಾಟಕದ ಪ್ರಭಾವಿ ಕಾಂಗ್ರೆಸ್ ಶಾಸಕರಾಗಿದ್ದ ಮಾಲೀಕಯ್ಯ ಗುತ್ತೇದಾರ್ ಅವರು ದೆಹಲಿಯಲ್ಲಿ ನಿನ್ನೆ  ಪಕ್ಷದ ಕಚೇರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ನೇತೃತ್ವದಲ್ಲಿ ಬಿಜೆಪಿಗೆ  ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಪಕ್ಷದ ಶಾಲು ಹೊದ್ದಿಸುವುದರ ಮೂಲಕ ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಕೇಂದ್ರ ಸಚಿವರಾದ ಅನಂತಕುಮಾರ್, ಪಿಯೂಷ್ ಗೋಯಲ್, ಪ್ರಕಾಶ್ ಜಾವಡೇಕರ್, ಸಂಸದ ಬಿ ಶ್ರೀರಾಮುಲು, ರಾಜ್ಯ ಉಸ್ತುವಾರಿ ಮುರುಳೀಧರ್ ರಾವ್ ಅವರು ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರು ಅಫಜಲ್ಪುರ ವಿಧಾನಸಭಾ ಕ್ಷೇತ್ರದಲ್ಲಿ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು,  ಇದೀಗ ಬಿಜೆಪಿ ಸೇರ್ಪಡೆಯಾಗಿದ್ದ ಕಾರಣ ಈ ಬಾರಿಯೂ ಕೂಡ ಅವರಿಗೆ ಪಕ್ಷದ ಟಿಕೆಟ್ ಖಚಿತವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಬ್ಬ ಮುಗಿದ್ಮೇಲೆ ಶುರು ಮಾಡೋಣ… ಎಸ್ಐಆರ್ ಹೋರಾಟದ ಬಗ್ಗೆ ಇಂಡಿಯಾ ಒಕ್ಕೂಟದ ಮಹತ್ವದ ತೀರ್ಮಾನ

ಹಿಂದೆಲ್ಲಾ ಬ್ಯಾಲೆಟ್ ಪೇಪರ್ ಇತ್ತು, ನಾವೂ ಒತ್ತುತ್ತಿದ್ವು… ಪರಮೇಶ್ವರ್ ಹಳೆ ವಿಡಿಯೋ ಮತ್ತೆ ವೈರಲ್ Video

ಸಿಜೆಪಿ ನಾಯಕರಾದ ಅಶುತೋಷ್ ರಂಕಾ, ಸೌರಭ್ ದಾಸ್ ಬಂಧನ: 5 ದಿನಗಳ ತಿಹಾರ್ ಜೈಲುಪಾಲು

ಸಿದ್ದರಾಮಯ್ಯ ನಕಲಿ ಸಿಡಿ ಪ್ರಕರಣ: ಇಬ್ಬರನ್ನು ವಶಕ್ಕೆ ಪಡೆದು ಸಿಸಿಬಿ ತೀವ್ರ ವಿಚಾರಣೆ

Karnataka Weather: ವಿವಿಧ ಜಿಲ್ಲೆಗಳಲ್ಲಿ ಬಿಸಿಲು, ಕೆಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ

ಮುಂದಿನ ಸುದ್ದಿ
Show comments