ಕಲಬುರ್ಗಿಯ ಕಾಂಗ್ರೆಸ್ ಪಕ್ಷದ ಮುಖಂಡರ ಮನೆ ಮೇಲೆ ಐಟಿ ದಾಳಿಗೆ ಖಂಡನೆ ವ್ಯಕ್ತವಾಗಿದೆ. ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿದೆ.
ಕಲಬುರ್ಗಿ ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿ ಎದುರು ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮುಖಂಡರ ಮನೆ ಮೇಲೆ ದಾಳಿ ಹಿಂದೆ ಬಿಜೆಪಿಯವರ ಕೈವಾಡವಿದೆ ಎಂದು ಆರೋಪಿಸಿದರು.
ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಸಿಎಂ ಎನ್.ಧರ್ಮಸಿಂಗರ್ ರ ಆಪ್ತ ಹಾಗೂ ಗುತ್ತಿಗೆದಾರರಾಗಿರುವ ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೀಲಕಂಠರಾವ ಮೂಲಗೆ ಹಾಗೂ ಸಚಿವ ಡಾ.ಶರಣಪ್ರಕಾಶ ಪಾಟೀಲ ರ ಆಪ್ತನಾಗಿರುವ ಗುತ್ತಿಗೆದಾರ ಬಸವರಾಜ್ ಸಜ್ಜನ್ ನಿವಾಸದ ಮೇಲೆ ನಿನ್ನೆ ಐಟಿ ದಾಳಿ ನಡೆದಿತ್ತು. ಇದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ.