Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕರ್ನಾಟಕದಲ್ಲಿ ಮುಂದುವರೆದ ಮಳೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಕರ್ನಾಟಕದಲ್ಲಿ ಮುಂದುವರೆದ ಮಳೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಬೆಂಗಳೂರು , ಸೋಮವಾರ, 30 ಆಗಸ್ಟ್ 2021 (08:09 IST)
Karnataka Rains Today:(ಆ.30): ಕರ್ನಾಟಕದಲ್ಲಿ ಮುಂಗಾರು ಪ್ರಭಾವ ಮುಂದುವರೆದಿದ್ದು, ಇಂದೂ ಸಹ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದ್ದು, ಇಂದೂ ಸಹ ಮಳೆ ಮುಂದುವರೆಯಲಿದೆ.

ಬೆಂಗಳೂರು ಸೇರಿದಂತೆ ಹಲವೆಡೆ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಕೋಲಾರ ಈ ಜಿಲ್ಲೆಗಳಲ್ಲಿ ಇಂದು ಮಳೆಯ ಪ್ರಮಾಣ ತೀವ್ರವಾಗಲಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಇಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಒಟ್ಟು 16 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ವರುಣನ ಅಬ್ಬರ ಮುಂದುವರೆದಿದೆ. ಭಾರತೀಯ ಹವಾಮಾನ ಇಲಾಖೆಯ(IMD-India Meteorological Department) ಮಾಹಿತಿ ಪ್ರಕಾರ, ಇಂದು ರಾಜ್ಯದ  ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ(SIK) ಭಾರೀ ಮಳೆಯಾಗಲಿದೆ. ಉಳಿದಂತೆ ಉತ್ತರ ಒಳನಾಡಿನಲ್ಲೂ(NIK) ಇಂದು ಮಳೆ ಮುಂದುವರೆಯಲಿದೆ.
ಜುಲೈ ತಿಂಗಳಲ್ಲಿ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದರು. ಈಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ಅದರಲ್ಲೂ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ವರುಣನ ಅಬ್ಬರ ಮುಂದುವರೆದಿದೆ. ಇಂದು ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಗದಗ, ರಾಯಚೂರು, ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ, ಕೊಪ್ಪಳ, ಯಾದಗಿರಿಯಲ್ಲಿ ಇಂದು ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ನಿಯಂತ್ರಣಕ್ಕೆ ಬರದಿದ್ದರೆ ಸೆಪ್ಟೆಂಬರ್ 15ರಿಂದ ಕೇರಳದಲ್ಲಿ ಲಾಕ್ ಡೌನ್?