Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ಇಷ್ಟು ದಿನ ಕಡಿಮೆಯಾಗಿದ್ದ ಕೊರೊನಾ ಪ್ರಕರಣಗಳು ಇದೀಗ ರಾಜ್ಯದಲ್ಲಿ ಹೆಚ್ಚಾಗುತ್ತಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನ ಎರಡು ಖಾಸಗಿ ಶಾಲೆಗಳಲ್ಲಿ ಕೊರೋನಾ ಸ್ಫೋಟಗೊಂಡಿದೆ. ದಾಸರಹಳ್ಳಿ ವಲಯದ ರಾಜ ಗೋಪಾಲನಗರದಲ್ಲಿ ಇರುವ ನ್ಯೂ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಮತ್ತು ಎಂಇಎಸ್ ಪಬ್ಲಿಕ್ ಸ್ಕೂಲ್ ಎಂಬ ಎರಡು ಖಾಸಗಿ ಶಾಲೆಗಳಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗಿದೆ.
ನ್ಯೂ ಇಂಟರ್ ನ್ಯಾಷನಲ್ ಸ್ಕೂಲ್ನಲ್ಲಿ 5 ಮತ್ತು 6 ನೇ ತರಗತಿಯಲ್ಲಿ ಓದುತ್ತಿದ್ದ 21 ಮಕ್ಕಳಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಎಂಇಎಸ್ ಪಬ್ಲಿಕ್ ಸ್ಕೂಲ್ನಲ್ಲಿ 5 ನೇ ತರಗತಿಯಲ್ಲಿ ಓದುತ್ತಿದ್ದ 10 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಸದ್ಯಕ್ಕೆ ಎಲ್ಲಾ ಮಕ್ಕಳಿಗೂ ಮತ್ತು ಶಾಲಾ ಸಿಬ್ಬಂದಿಗೂ ಕೋವಿಡ್ ಟೆಸ್ಟ್ ಮಾಡಲಾಗಿದೆ. ಸದ್ಯ ಶಾಲೆಗಳನ್ನು ಕಂಟೈನ್ಮೆಂಟ್ ಅಂತ ಘೋಷಣೆ ಮಾಡಲಾಗಿದ್ದು, ಕೊರೊನಾ ಪಾಸಿಟಿವ್ ಬಂದಿರುವ ಮಕ್ಕಳೆಲ್ಲರೂ ಕೂಡ ಕ್ಷೇಮವಾಗಿದ್ದು, ಯಾವುದೇ ಆತಂಕ ಪಡುವಂತ ಅಗತ್ಯವಿಲ್ಲ ಎನ್ನಲಾಗುತ್ತಿದೆ.