Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೆ ಏರುತ್ತಿದೆ.
ಇಂದು ಒಂದೇ ದಿನ ರಾಜ್ಯದಲ್ಲಿ 25 ಸಾವಿರ ಪ್ರಕರಣ ದೃಢಪಟ್ಟಿದ್ದು, ಬೆಂಗಳೂರಿನಲ್ಲೇ 18 ಸಾವಿರ ಮಂದಿಗೆ ಸೋಂಕು ತಗುಲಿದೆ. ಕೋವಿಡ್ ಪ್ರಕರಣಗಳ ಕುರಿತು ಸಚಿವ ಡಾ. ಕೆ.ಸುಧಾಕರ್ ಟ್ವಿಟ್ಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದಲ್ಲಿ ಇಂದು 25,005 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.
ಬೆಂಗಳೂರಿನಲ್ಲಿ 18,347 ಮಂದಿಗೆ ಸೋಂಕು ತಗುಲಿದೆ. ಪಾಸಿಟಿವಿಟಿ ದರ ಶೇ.12.39 ಆಗಿದೆ ಎಂದು ತಿಳಿಸಿದ್ದಾರೆ. ರಾಜ್ಯಾದ್ಯಂತ ಈವರೆಗೂ 2,363 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.