ರಾಜ್ಯದಲ್ಲಿ ಮತ್ತೆ ಏರಿಕೆ ಕಂಡ ಕೊರೊನಾ!

Webdunia
ಮಂಗಳವಾರ, 7 ಜೂನ್ 2022 (12:15 IST)
ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೊನಾ ಪಾಸಿಟಿವ್ ಕೇಸ್ಗಳ ಸಂಖ್ಯೆ 297ಕ್ಕೆ ಏರಿಕೆ ಕಂಡಿದ್ದು, ಈ ಮೂಲಕ ಮುನ್ನೂರರ ಸನಿಹಕ್ಕೆ ಕಾಲಿಟ್ಟಿದೆ.

ಇನ್ನೊಂದೆಡೆ ಬೆಂಗಳೂರು ನಗರ ಒಂದರಲ್ಲೇ 276 ಕೇಸ್ ವರದಿಯಾಗಿ ಆತಂಕ ಮೂಡಿಸಿದೆ. ಬೆಂಗಳೂರಿನಲ್ಲಿ 276 ಪಾಸಿಟಿವ್ ಪ್ರಕರಣ ವರದಿಯಾಗಿರುವುದು ನಗರದಲ್ಲಿ ಮತ್ತೆ ಕೊರೊನಾ ಆತಂಕ ಮೂಡಿಸುತ್ತಿದೆ.

ಬೆಂಗಳೂರು ಹೊರತು ಪಡಿಸಿ ದಕ್ಷಿಣಕನ್ನಡದಲ್ಲಿ ದಾಖಲಾದ 8 ಪ್ರಕರಣ ಜಿಲ್ಲೆಯಲ್ಲಿ ದಾಖಲಾದ ಹೆಚ್ಚಿನ ಕೇಸ್ ಆಗಿದೆ. ಪಾಸಿಟಿವ್ ಕೇಸ್ಗಳ ಸಂಖ್ಯೆ ಏರಿಕೆ ಕಾಣುವುದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ ಏರಿಕೆ ಕಾಣುತ್ತಿದೆ. ಇಂದು ಸಕ್ರಿಯ ಪ್ರಕರಣಗಳ ಸಂಖ್ಯೆ 2,204ಕ್ಕೆ ತಲುಪಿದೆ. 

ಬೆಂಗಳೂರು ಹೊರತು ಪಡಿಸಿ ಉಳಿದಂತೆ 8 ಜಿಲ್ಲೆಗಳಲ್ಲಿ 21 ಕೇಸ್ ಮತ್ತು 21 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇಂದು ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ಇಂದು 187 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 1.45 ದಾಖಲಾಗಿದ್ದು, ರಾಜ್ಯದಲ್ಲಿ ಈವರೆಗೆ ಒಟ್ಟು 40,065 ಮರಣ ಪ್ರಕರಣ ಪತ್ತೆಯಾಗಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾನಿಪೂರಿ ಪಾನಿಯೊಳಗಿನಿಂದ ಹಾರಿದ ಜೀವಿ ನೋಡಿದ್ರೆ ಇನ್ನು ಗೋಲ್ ಗಪ್ಪಾ ತಿನ್ನಲೂ ಭಯಪಡ್ತೀರಿ Video

ಟ್ರಕ್ ಮೇಲೆ ಕೂತಿದ್ದ ವ್ಯಕ್ತಿಗೆ ಹೈಟೆನ್ಷನ್ ತಂತಿ ತಗುಲಿದ ಭಯಾನಕ ವಿಡಿಯೋ

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಭ್ರಷ್ಟಾಚಾರ ಮುಚ್ಚಿಟ್ಟುಕೊಳ್ಳಲು ನಾಟಕ ಎಂದ ಆರ್ ಅಶೋಕ್

ಬಿಕ್ಲು ಶಿವ ಕೊಲೆ ಪ್ರಕರಣ: ಪೊಲೀಸ್‌ಗೆ ತಲೆನೋವಾದ ಬೈರತಿ ಬಸವರಾಜ್ ನಡವಳಿಕೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments