ನವದೆಹಲಿ : ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 15,981 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 166 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,40,53,573ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,51,980ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,01,632ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 17,861 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,33,99,961ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 9,23,003 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 58,98,35,258 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.