ಲಕ್ನೋ : ವಿಶ್ವಪ್ರಸಿದ್ಧ ಪ್ರವಾಸಿ ತಾಣ, ಪ್ರೇಮಿಗಳ ಸ್ವರ್ಗ ತಾಜ್ಮಹಲ್ಗೆ ಭೇಟಿ ನೀಡಬಯಸುವ ಪ್ರವಾಸಿಗರಿಗೂ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ ಎಂದು ಆಗ್ರಾದ ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
ದೇಶದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಹೈವೋಲ್ಟೇಜ್ ಸಭೆ ನಡೆಸಲಾಯಿತು. ಸಭೆಯ ಬಳಿಕ ಆರೋಗ್ಯಾಧಿಕಾರಿಗಳು ನಿರ್ಣಯ ಪ್ರಕಟಿಸಿದ್ದಾರೆ.
ಆಗ್ರಾದ ತಾಜ್ಮಹಲ್ ವೀಕ್ಷಿಸಲು ದೇಶ, ವಿದೇಶ ಪ್ರವಾಸಿಗರು ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಹಾಗಾಗಿ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭೇಟಿಗೂ ಮುನ್ನ ಕೋವಿಡ್ ಪರೀಕ್ಷೆಗೆ ಒಳಗಾಗುವಂತೆ ಸೂಚಿಸಿದ್ದಾರೆ.