Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನವದೆಹಲಿ : ಲೋಕಸಭಾ ಚುನಾವಣೆಗೆ ಮುನ್ನ ನಡೆಯುತ್ತಿರುವ ದೇಶದ ವಿವಿಧ ರಾಜ್ಯಗಳ ವಿಧಾನಸಭಾ ಕ್ಷೇತ್ರ ಮತ್ತು 3 ಲೋಕಸಭಾ ಕ್ಷೇತ್ರಗಳ ಉಪ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದೆ.
ಈಗಾಗಲೇ ಕರ್ನಾಟಕದ ಎರಡು ವಿಧಾನ ಸಭಾ ಕ್ಷೇತ್ರ ಸೇರಿದಂತೆ ಹಲವು ರಾಜ್ಯಗಳ ಫಲಿತಾಂಶ ಹೊರ ಬಿದ್ದಿದೆ. ಪಶ್ಚಿಮ ಬಂಗಾಳದಲ್ಲಿ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಅಭೂತ ಪೂರ್ವ ವಿಜಯ ಸಾಧಿಸಿದೆ. ಇನ್ನು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರವನ್ನೂ ಕೂಡ ಬಿಜೆಪಿ ಕಳೆದುಕೊಂಡಿದ್ದು, ತೀವ್ರ ಮುಖಭಂಗ ಅನುಭವಿಸಿದೆ. ಇದರ ಜೊತೆಗೆ ಫತೇಪುರ್, ಅರ್ಕಿ ಮತ್ತು ಜುಬ್ಬಾಯಿ-ಕೊತ್ಕೈಯ ಮೂರು ವಿಧಾನಸಭಾ ಸ್ಥಾನಗಳನ್ನು ಕಳೆದುಕೊಳ್ಳುವ ನಿರೀಕ್ಷೆಯಿದೆ.