ಬೆಂಗಳೂರು : ಬಿಪಿಎಲ್ ಪಡಿತರದಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಫಲಾನುಭವಿಗಳಿಗೆ ಈವರೆಗೆ ವಿತರಿಸುತ್ತಿದ್ದ 5 ಕೆಜಿ ಜೊತೆಗೆ 1 ಕೆಜಿ ಹೆಚ್ಚುವರಿಯಾಗಿ ಅಕ್ಕಿ ವಿತರಣೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಆದ್ಯತಾ ಪಡಿತರ ಚೀಟಿಗಳ (ಬಿಪಿಎಲ್) ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು ತಲಾ 5 ಕೆಜಿ ಅಕ್ಕಿ ವಿತರಿಸಲಾಗುತ್ತಿತ್ತು. ಈಗ 1 ಕೆಜಿ ಹೆಚ್ಚುವರಿ ಸೇರಿದಂತೆ ಒಟ್ಟು 6 ಕೆಜಿ ಅಕ್ಕಿ ವಿತರಿಸಲಾಗುವುದು. ಜನವರಿ 1ರಿಂದಲೇ ಈ ಆದೇಶ ಜಾರಿಗೊಂಡಿದೆ ಎಂದು ಸರ್ಕಾರ ತಿಳಿಸಿದೆ.
ರಾಜ್ಯದಲ್ಲಿರುವ ಆದ್ಯತಾ ಪಡಿತರ ಚೀತಿಗಳ ಪ್ರತಿ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲಾಗುತ್ತಿರುವ 5 ಕೆಜಿ ಆಹಾರ ಧಾನ್ಯದೊಂದಿಗೆ ಹೆಚ್ಚುವರಿಯಾಗಿ ಪ್ರತಿ ತಿಂಗಳು 1 ಕೆಜಿ ಅಕ್ಕಿಯನ್ನು ವಿತರಿಸಲು ಸರ್ಕಾರ ಆದೇಶಿಸಿದೆ.