ಬೆಂಗಳೂರು : ದೀಪಾವಳಿ ಹಬ್ಬಕ್ಕೂ ಧರ್ಮದ ಕಿಚ್ಚು ಹೊತ್ತಿಕೊಂಡಿದೆ. ದೀಪಾವಳಿ ಹಬ್ಬಕ್ಕೆ ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನಬಹಿಷ್ಕರಿಸಿ ಎಂದು ಹಿಂದೂ ಸಂಘಟನೆಗಳು ಕರೆ ಕೊಟ್ಟಿವೆ.
ಹಲಾಲ್ ಪ್ರಮಾಣ ಪತ್ರದ ಹೆಸರಿನಲ್ಲಿ ದೇಶಾದ್ಯಂತ ಹಿಂದೂ ವ್ಯಾಪಾರಿಗಳಿಂದ ಸಾವಿರಾರು ಕೋಟಿ ರೂಪಾಯಿ ಲೂಟಿ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ ಮಹಾ ಸಭೆ ನಡೆಸಿರುವ ಹಿಂದೂ ಸಂಘಟನೆಗಳು ಪ್ರತಿ ಜಿಲ್ಲೆಗಳಲ್ಲೂ ಅಭಿಯಾನ ನಡೆಸಲು ಮುಂದಾಗಿವೆ.
ನಮ್ಮ ಅಭಿಯಾನ ರಾಜ್ಯಾದ್ಯಾಂತ ನಡೆಯಲಿದೆ ಎಂದು ಹಿಂದೂ ಜನ ಜಾಗೃತಿ ವೇದಿಕೆಯ ಮೋಹನ್ ಗೌಡ ಹೇಳಿದ್ದಾರೆ.