Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ವಿಧಾನಸಭೆ ಸರಿಯಾಗಿ ನಡೆಯಲಿಲ್ಲ. 5ದಿನ ಕಲಾಪ ವ್ಯರ್ಥ ಆಯಿತು.
ಆದರೆ ಮುಖ್ಯಮಂತ್ರಿ, ಮಂತ್ರಿಗಳು, ಶಾಸಕರ ಸಂಬಳ ಮಾತ್ರ ಹೆಚ್ಚಾಗಬೇಕು. ಇವತ್ತು ಮುಖ್ಯಮಂತ್ರಿ, ಮಂತ್ರಿಗಳು, ಶಾಸಕರ ಸಂಬಳ, ಭತ್ಯೆ ಹೆಚ್ಚಳ ಮಾಡಿಕೊಂಡಿದ್ದಾರೆ.
ವಿಧಾನಸಭೆಯಲ್ಲಿ ಕಾಂಗ್ರೆಸ್ ಧರಣಿ ಮಧ್ಯೆಯೇ ಎರಡು ವಿಧೇಯಕಗಳು ಮಂಡನೆಯಾಗಿ ಅಂಗೀಕಾರವೂ ಆಯಿತು.
ವಿಧೇಯಕ ಅಂಗೀಕಾರವಾಗಿದ್ದರಿಂದ ಮುಖ್ಯಮಂತ್ರಿ, ಮಂತ್ರಿಗಳು, ಸಭಾಧ್ಯಕ್ಷರು, ವಿರೋಧ ಪಕ್ಷದ ನಾಯಕರು, ಶಾಸಕರು, ಪರಿಷತ್ ಸದಸ್ಯರ ಸಂಬಳ ಹೆಚ್ಚಳ ಆಗಿದೆ. ಬರೋಬ್ಬರಿ ಶೇಕಡಾ 50%ರಷ್ಟು ಸಂಬಳ, ಭತ್ಯೆ ಹೆಚ್ಚಳ ಆಗಿದೆ.