Publish Date: Sun, 29 Jul 2018 (08:43 IST)
Updated Date: Sun, 29 Jul 2018 (08:44 IST)
ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸಂಸದ ಡಿವಿ ಸದಾನಂದ ಗೌಡ ತಮ್ಮ ಕ್ಷೇತ್ರ ಬದಲಾವಣೆ ಮಾಡಲಿದ್ದಾರೆ ಎಂಬ ಸುದ್ದಿಯಿದೆ. ಅದರ ಬಗ್ಗೆ ಅವರೇ ಸ್ಪಷ್ಟನೆ ನೀಡಿದ್ದಾರೆ.
ಸದ್ಯಕ್ಕೆ ಬೆಂಗಳೂರು ಉತ್ತರ ಕ್ಷೇತ್ರ ಪ್ರತಿನಿಧಿಸುತ್ತಿರುವ ಸದಾನಂದ ಗೌಡ ತಾವು ಹಿಂದೆ ಪ್ರತಿನಿಧಿಸುತ್ತಿದ್ದ ಚಿಕ್ಕಮಗಳೂರು ಕ್ಷೇತ್ರದಲ್ಲಿ ಸ್ಪರ್ಧಿಸಲು ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿತ್ತು.
ಆದರೆ ಈ ಬಗ್ಗೆ ಅವರೇ ಮಾಧ್ಯಮಗಳ ಮುಂದೆ ಸ್ಪಷ್ಟನೆ ನೀಡಿದ್ದು ‘ಇಂತಹ ಯಾವುದೇ ಆಲೋಚನೆ ನನಗಿಲ್ಲ. ಈ ರೀತಿ ನಾನು ಎಲ್ಲಿಯೂ ಹೇಳಿಕೆ ನೀಡಿಲ್ಲ. ನಾನು ಯಾವ ಕ್ಷೇತ್ರದಲ್ಲಿ ಸ್ಪರ್ದಿಸಬೇಕು ಎನ್ನುವುದನ್ನು ಪಕ್ಷ ನಿರ್ಧರಿಸುತ್ತದೆ. ಪಕ್ಷ ಎಲ್ಲಿ ಸ್ಪರ್ಧಿಸಿ ಎನ್ನುತ್ತದೋ ಅಲ್ಲಿ ಸ್ಪರ್ಧಿಸುತ್ತೇನೆ, ಎಲ್ಲಿ ಬೇಡ ಎನ್ನುತ್ತದೆ ಅಲ್ಲಿ ಸ್ಪರ್ಧಿಸುವುದಿಲ್ಲ. ಇಂತಹ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರು ದೇಶ ದ್ರೋಹಿಗಳು’ ಎಂದು ಸದಾನಂದ ಗೌಡ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.