ಬೆಂಗಳೂರು : ವಿಧಾನ ಪರಿಷತ್ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗುವ ಸ್ಥಾನಗಳಿಗೆ ಮೂರು ಪಕ್ಷಗಳು ಸಕಲ ತಯಾರಿ ಮಾಡಿಕೊಂಡಿವೆ.
20 ಕ್ಷೇತ್ರಗಳ 25 ಸ್ಥಾನಗಳಿಗೆ ಚುನಾವಣೆ
ದಕ್ಷಿಣ ಕನ್ನಡ, ಧಾರವಾಡ, ವಿಜಯಪುರ, ಬೆಳಗಾವಿ, ಬಳ್ಳಾರಿ, ಮೈಸೂರಿನ ತಲಾ 2 ಕ್ಷೇತ್ರ, ಚಿಕ್ಕಮಗಳೂರು, ಕಲಬುರಗಿ, ಉತ್ತರ ಕನ್ನಡ, ಬೀದರ್, ರಾಯಚೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಶಿವಮೊಗ್ಗ, ಹಾಸನ, ಚಿತ್ರದುರ್ಗ, ಕೋಲಾರ, ತುಮಕೂರು ಸೇರಿದಂತೆ ಒಟ್ಟು 20 ಕ್ಷೇತ್ರಗಳಲ್ಲಿ 25 ಸ್ಥಾನಗಳಿಗೆ ಇಂದು ಚುನಾವಣೆ ನಡೆಯಲಿದ್ದು,
ಪುರುಷ ಮತದಾರರು 48,368 ಮಹಿಳಾ ಮತದಾರರು 51,474ರಷ್ಟಿದೆ. ಒಟ್ಟು 6072 ಮತಗಟ್ಟೆಗಳಿದ್ದು, ಬೆಳಗ್ಗೆ 8 ರಿಂದ ಸಂಜೆ 4 ರವರೆಗೂ ಮತದಾನ ನಡೆಯಲಿದೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ 20 ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿಗಳನ್ನು ನಿಲ್ಲಿಸಿದ್ದು. ಜೆಡಿಎಸ್ 6 ಕ್ಷೇತ್ರದಲ್ಲಿ ಮಾತ್ರ ಸ್ಪರ್ಧೆ ಮಾಡಿದೆ.
ಚುನಾವಣೆ ಫಲಿತಾಂಶ ಡಿಸೆಂಬರ್ 14 ರಂದು ಹೊರಬೀಳಲಿದೆ.
ಗ್ರಾಮ ಪಂಚಾಯತ್ ಹಾಗೂ ಕೆಲವು ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರು ಮತದಾನದ ಹಕ್ಕು ಚಲಾಯಿಸಲಿದ್ದಾರೆ. ಸ್ಥಳೀಯ ಸಂಸ್ಥೆಗಳಿಂದ ಒಟ್ಟು 25 ಮಂದಿ ಅಭ್ಯರ್ಥಿಗಳು ಆಯ್ಕೆಯಾಗಲಿದ್ದು ಮೂರು ಪಕ್ಷಗಳಿಗೂ ಪ್ರತಿಷ್ಟೆಯ ಪ್ರಶ್ನೆಯಾಗಿದೆ. ಸರ್ಕಾರದಿಂದ ನಾಮ ನಿರ್ದೇಶನಗೊಂಡ ಸದಸ್ಯರಿಗೆ ಮತದಾನದ ಹಕ್ಕು ನೀಡಬಾರದು ಅಂತ ಕಾಂಗ್ರೆಸ್ ಕೋರ್ಟ್ ಮೆಟ್ಟಿಲು ಹತ್ತಿತ್ತು. ಇದಕ್ಕೆ ಪುರಸ್ಕಾರ ನೀಡಿರುವ ಕೋರ್ಟ್ ನಾಮ ನಿರ್ದೇಶಿತ ಸದಸ್ಯರ ಓಟನ್ನು ಸೀಲ್ಡ್ ಕವರ್ ನಲ್ಲಿ ಇರಿಸಬೇಕು, ಮತ ಎಣಿಕೆಗೆ ಪರಿಗಣಿಸಬಾರದು ಅಂತ ಮಧ್ಯಂತರ ಆದೇಶ ನೀಡಿದೆ.