Publish Date: Friday, 30 December 2022 (07:43 IST)
Updated Date: Friday, 30 December 2022 (11:21 IST)
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಗ್ರಾಹಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಬೆಸ್ಕಾಂ, ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ದರ ಇಳಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಇಂಧನ ಸಚಿವ ಸುನಿಲ್ ಕುಮಾರ್ ಅವರು, ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ ತೆಗದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಬೆಸ್ಕಾಂ ವ್ಯಾಪ್ತಿಯಲ್ಲಿ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ 39 ಪೈಸೆ ಕಡಿತ ಮಾಡಲಾಗಿದ್ದು, ಇದರ ಪ್ರಯೋಜನ ನೇರವಾಗಿ ಗ್ರಾಹಕರಿಗೆ ಲಭಿಸಲಿದೆ ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.