ನವದೆಹಲಿ : ವಿದ್ಯಾರ್ಥಿಗಳಿಗೆ ಗುಣಮಟ್ಟದ ಪುಸ್ತಕಗಳ ಲಭ್ಯತೆಗಾಗಿ ರಾಷ್ಟ್ರೀಯ ಡಿಜಿಟಲ್ ಗ್ರಂಥಾಲಯವನ್ನು ಸ್ಥಾಪಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದರು.
ತಮ್ಮ ಬಜೆಟ್ ಭಾಷಣದಲ್ಲಿ, ಮಕ್ಕಳಿಗಾಗಿ ರಾಷ್ಟ್ರೀಯ ಡಿಜಿಟಲ್ ಗ್ರಂಥಾಲಯ ಸ್ಥಾಪಿಸಲಾಗುವುದು. ಈ ಡಿಜಿಟಲ್ ಗ್ರಂಥಾಲಯದಲ್ಲಿ ಭೌಗೋಳಿಕತೆ, ಭಾಷೆ ಸೇರಿದಂತೆ ಎಲ್ಲ ಪ್ರಕಾರದ ಹಾಗೂ ಎಲ್ಲ ಹಂತಗಳಲ್ಲಿ ಗುಣಮಟ್ಟದ ಪುಸ್ತಕಗಳು ಲಭ್ಯತೆ ಇರುತ್ತದೆ ಎಂದು ತಿಳಿಸಿದರು.
2023-24ರ ಬಜೆಟ್ ನಿರ್ಮಲಾ ಸೀತಾರಾಮನ್ ಅವರ ಐದನೇ ನೇರ ಬಜೆಟ್ ಆಗಿದೆ. 2024ರ ಲೋಕಸಭಾ ಚುನಾವಣೆಯ ಮುನ್ನ ನಡೆದ ಪೂರ್ಣ ಪ್ರಮಾಣದ ಕೇಂದ್ರ ಬಜೆಟ್ ಇದಾಗಿದೆ.