Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಟ್ರಾಫಿಕ್ ನಿಯಮ ಶೀಘ್ರವೇ ಜಾರಿ : ಆರಗ ಜ್ಞಾನೇಂದ್ರ

ಟ್ರಾಫಿಕ್ ನಿಯಮ ಶೀಘ್ರವೇ ಜಾರಿ : ಆರಗ ಜ್ಞಾನೇಂದ್ರ
ಬೆಂಗಳೂರು , ಶುಕ್ರವಾರ, 11 ಮಾರ್ಚ್ 2022 (07:12 IST)
ಬೆಂಗಳೂರು : ಟ್ರಾಫಿಕ್ ನಿಯಮ ಮತ್ತು ಟೋಯಿಂಗ್ಗೆ ವಿಶೇಷ ನಿಯಮ ಪೊಲೀಸ್ ಇಲಾಖೆ ಶೀಘ್ರವೇ ಜಾರಿಗೆ ತರಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ವಿಧಾನಪರಿಷತ್ನಲ್ಲಿ ಪ್ರಶ್ನೋತ್ತರ ಅವಧಿ ವೇಳೆ ಕಾಂಗ್ರೆಸ್ ಸದಸ್ಯ ಸಲೀಂ ಅಹಮದ್ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಜನಸ್ನೇಹ ನಿಯಮ ರಾಜ್ಯದಲ್ಲಿ ಜಾರಿ ಮಾಡಲಾಗುತ್ತದೆ ಅಂತ ಭರವಸೆ ಕೊಟ್ಟರು. 

ರಾಜ್ಯದಲ್ಲಿ 1,05,864 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಇದ್ದಾರೆ. ರಾಜ್ಯದಲ್ಲಿರುವ ಜನಸಂಖ್ಯೆಗೆ ಅನುಪಾತವೂ 577 ಇದೆ. ಅಂದರೆ 577 ಜನರಿಗೆ ಒಬ್ಬ ಪೊಲೀಸ್ ಇದ್ದಾರೆ ಅಂತ ಸಚಿವರು ಮಾಹಿತಿ ನೀಡಿದರು.

ಕಳೆದ 5 ವರ್ಷಗಳಲ್ಲಿ 35 ಸಾವಿರ ಹುದ್ದೆ ಭರ್ತಿ ಮಾಡಲಾಗಿದೆ. ಬಾಕಿ ಇರುವ ಸಬ್ ಇನ್ಸ್ಪೆಕ್ಟರ್ ನೇಮಕ ಆಗಿದೆ. ಅವ್ರಿಗೆ ಟ್ರೈನಿಂಗ್ ಆಗುತ್ತಿದೆ. ಅವರು ಬಂದ್ರೆ ಸಬ್ ಇನ್ಸ್ಪೆಕ್ಟರ್. ಎಲ್ಲಾ ಹುದ್ದೆ ಭರ್ತಿ ಆಗುತ್ತದೆ. ಪೇದೆಗಳ ನೇಮಕಾತಿಯೂ ಆಗಿದೆ. ಪ್ರತಿ ವರ್ಷ 4 ಸಾವಿರ ಪೊಲೀಸರ ನೇಮಕ ಆಗುತ್ತಿದೆ ಎಂದು ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕದಲ್ಲಿ ಕಾಂಗ್ರೆಸ್ ಮುಳುಗಲಿದೆ : ಬೊಮ್ಮಾಯಿ