ಬೆಂಗಳೂರು: ಮಾರುತಿ ಗೌಡ ಕಿಡ್ನಾಪ್ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ಮತ್ತು ಅವರ ನಾಲ್ವರು ಸಹಚರರಿಗೆ ಸೆಷನ್ಸ್ ಕೋರ್ಟ್ ಕೊನೆಗೂ ಜಾಮೀನು ಮಂಜೂರು ಮಾಡಿದೆ.
ಕಳೆದ ನಾಲ್ಕು ದಿನಗಳಿಂದ ಜೈಲಿನಲ್ಲೇ ಕಳೆಯುತ್ತಿರುವ ನಟ ದುನಿಯಾ ವಿಜಯ್ ಜಾಮೀನು ಅರ್ಜಿಯನ್ನು ಈ ಮೊದಲು ಎಂಸಿಎಂಎಂ ನ್ಯಾಯಾಲಯ ತಿರಸ್ಕರಿಸಿತ್ತು. ಅದಾದ ಬಳಿಕ ವಿಜಯ್ ಪರ ವಕೀಲರು ಸೆಷನ್ಸ್ ಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು.
ಇದೀಗ ಪ್ರಕರಣದ ವಿಚಾರಣೆ ನಡೆಸಿ ತೀರ್ಪು ನೀಡಿದ ಸೆಷನ್ಸ್ ಕೋರ್ಟ್ ಜಾಮೀನು ನೀಡಿದೆ. ಆದರೆ ಒಬ್ಬ ನಟನಾಗಿ ಸಮಾಜಕ್ಕೆ ಮಾದರಿಯಾಗಿರಬೇಕು. ಮಾಧ್ಯಮಗಳಿವೆ, ಎಲ್ಲರೂ ನಿಮ್ಮನ್ನು ನೋಡುತ್ತಿರುತ್ತಾರೆ ಎಂಬುದು ನೆನಪಿರಬೇಕು. ಈಗ ಜಾಮೀನು ನೀಡಿದ್ದೇನೆ, ಆದರೆ ಮುಂದೆ ಹೀಗಾಗದಂತೆ ಎಚ್ಚರವಹಿಸಬೇಕು ಎಂದು ವಿಜಯ್ ಪರ ವಕೀಲರಿಗೆ ನ್ಯಾ. ಟಿಪಿ ರಾಮಲಿಂಗೇಗೌಡ ಮೌಖಿಕ ಎಚ್ಚರಿಕೆಯನ್ನೂ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.