ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಲಸಿಕೆಯ ಮೊದಲ ಡೋಸ್ನಲ್ಲಿ 100% ಹಾಗೂ ಎರಡನೇ ಡೋಸ್ನಲ್ಲಿ 85.3% ಪ್ರಗತಿಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 15-17 ವರ್ಷದ ಮಕ್ಕಳಲ್ಲಿ ಶೇ.67.5% ಮೊದಲ ಡೋಸ್ ಆಗಿದೆ. 4,85,818 ಬೂಸ್ಟರ್ ಡೋಸ್ ನೀಡಲಾಗಿದೆ.
ಒಟ್ಟು 9,33,92,626 ಡೋಸ್ಗಳನ್ನು ಈವರೆಗೆ ನೀಡಲಾಗಿದೆ. ಲಸಿಕಾಕರಣದಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದು, ಉತ್ತಮ ಪ್ರಗತಿಯಲ್ಲಿದೆ ಎಂದು ಹೇಳಿದರು.
ಜನವರಿಯಲ್ಲಿ 32 ಲಕ್ಷ ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ. ಯಾವ ರಾಜ್ಯವೂ ಇಷ್ಟು ಅಧಿಕ ಸಂಖ್ಯೆಯಲ್ಲಿ ಪರೀಕ್ಷೆ ಮಾಡಿಲ್ಲ. ಒಟ್ಟು 6 ಕೋಟಿ ಪರೀಕ್ಷೆಗಳನ್ನು ಮಾಡಿದ್ದು, ಇದು ಬೇರೆ ರಾಜ್ಯಗಳಿಗೆ ಮಾದರಿಯಾಗಿದೆ ಎಂದರು.