Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ನಗರದಿಂದ ಹಲವು ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಫ್ಲೈಓವರ್ ಕಾಮಗಾರಿ ಪೂರ್ಣಗೊಂಡಿದೆ.
ಇಂದು ಸಂಜೆ 6 ಗಂಟೆಯಿಂದ ಲಘುವಾಹನಗಳ ಸಂಚಾರಕ್ಕೆ ಫ್ಲೈಓವರ್ ಮುಕ್ತಾವಾಗಲಿದೆ.
ತಿಂಗಳ ಹಿಂದೆ ಕಾಮಗಾರಿಗಾಗಿ ಬಂದ್ ಮಾಡಲಾಗಿದ್ದ ಪೀಣ್ಯ ಫ್ಲೈಓವರ್ ಕಾಮಗಾರಿ ಪೂರ್ಣಗೊಂಡಿದ್ದು ಇಂದಿನಿಂದ ಕಾರು, ಬೈಕ್, ಆಟೋ ಸೇರಿದಂತೆ ಲೈಟ್ ವೇಟ್ ವಾಹನ ಸಂಚಾರಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅನುಮತಿ ನೀಡಿದೆ.
ಇಂದು ಸಂಜೆಯಿಂದ ಸಂಚಾರಕ್ಕೆ ಅನುವು ಮಾಡಿಕೊಡುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಂಚಾರ ವಿಭಾಗದ ಡಿಸಿಪಿಗೆ ಪತ್ರದ ಮೂಲಕ ತಿಳಿಸಿದೆ.
ಫ್ಲೈಓವರ್ ಕಾಮಗಾರಿ ಕುಂಟುತ್ತ ಸಾಗುತ್ತಿದ್ದರಿಂದಾಗಿ ಹಲವು ಸಮಸ್ಯೆಗಳು ಎದುರಾಗಿದ್ದವು. ಇದೀಗ ಕಾಮಗಾರಿ ಬಳಿಕ ರಸ್ತೆಗೆ ಹೆಚ್ಚಿನ ದೀಪಗಳ ಅಳವಡಿಕೆ, ತುರ್ತು ಸಂದರ್ಭದಲ್ಲಿ ಅಗತ್ಯ ವಾಹನ ವ್ಯವಸ್ಥೆ ಸೇರಿದಂತೆ ಕೆಲವು ಅಗತ್ಯ ಕ್ರಮ ವಹಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಧಿಕಾರಕ್ಕೆ ಪೊಲೀಸರಿಂದ ಮನವಿ ಸಲ್ಲಿಸಲಾಗಿದೆ.