Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಇನ್ಮುಂದೆ ಹೋಟೆಲ್ ತಿಂಡಿ, ತಿನಿಸು ದುಬಾರಿ!

ಇನ್ಮುಂದೆ ಹೋಟೆಲ್ ತಿಂಡಿ, ತಿನಿಸು ದುಬಾರಿ!
ಮಂಗಳೂರು , ಸೋಮವಾರ, 7 ಆಗಸ್ಟ್ 2023 (07:56 IST)
ಮಂಗಳೂರು : ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯ ಕಾರಣ ನೀಡಿ ಬೆಂಗಳೂರಿನಲ್ಲಿ ಹೋಟೆಲ್, ರೆಸ್ಟೋರೆಂಟ್ಗಳ ಆಹಾರ ಬೆಲೆಯನ್ನು ಇತ್ತೀಚೆಗಷ್ಟೇ ಹೆಚ್ಚಳ ಮಾಡಲಾಗಿದೆ.
 
ಇದರ ಬೆನ್ನಲ್ಲೇ ಇದೀಗ ಮಂಗಳೂರು ನಗರದ ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳು ಆಹಾರ ಮತ್ತು ಪಾನೀಯಗಳ ಬೆಲೆಯನ್ನು ಶೇ 10 ರಷ್ಟು ಹೆಚ್ಚಿಸಿವೆ. ಗ್ಯಾಸ್, ಬಾಡಿಗೆ ಮತ್ತು ವಿದ್ಯುತ್ ಬೆಲೆ ಏರಿಕೆಯಿಂದಾಗಿ ಜಿಲ್ಲೆಯ ಇತರ ಪಟ್ಟಣಗಳ ಹೋಟೆಲ್ಗಳೂ ಮುಂದಿನ ದಿನಗಳಲ್ಲಿ ಆಹಾರ ಪದಾರ್ಥಗಳ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಕೆಲವು ಹೋಟೆಲ್ಗಳು ಸಾಮಾನ್ಯವಾಗಿ ಸೆಪ್ಟೆಂಬರ್ನಲ್ಲಿ ಮೆನುಗಳಲ್ಲಿ ಬೆಲೆಗಳನ್ನು ಹೆಚ್ಚಿಸುತ್ತವೆ. ಆದರೆ ಈ ವರ್ಷ ಮೊದಲೇ ಮಾಡಬೇಕಾಗಿ ಬಂದಿದೆ. ಆಗಸ್ಟ್ 1 ರಿಂದ ಜಾರಿಗೆ ಬರುವಂತೆ ಆಹಾರ ಮತ್ತು ಪಾನೀಯಗಳ ಬೆಲೆಯನ್ನು ಶೇ 10 ರಷ್ಟು ಹೆಚ್ಚಿಸಲು ಸಂಘವು ನಿರ್ಧರಿಸಿದೆ ಎಂದು ಹೋಟೆಲ್ ಉದ್ಯಮಿ ಮತ್ತು ದಕ್ಷಿಣ ಕನ್ನಡ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಕುಡ್ಪಿ ಜಗದೀಶ್ ಶೆಣೈ ಹೇಳಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರದ ಹೆಸರಲ್ಲಿ ಮದ್ಯಪ್ರಿಯರಿಂದ ದುಪಟ್ಟು ಹಣ ವಸೂಲಿ