ರಾಜ್ಯದಲ್ಲಿ ವಿಧಾನಸಭೆಗೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ನೀತಿ ಸಂಹಿತೆಯನ್ನು ಜಾರಿಗೊಳಿಸಿತ್ತು. ಈ ನೀತಿ ಸಂಹಿತೆ ಜಾರಿಯಾದ ಬಳಿಕವೇ ಸಚಿವರ ಸ್ವಜಾತಿಯ ಅಧಿಕಾರಿಯಾದ ಗದಗ ಜಿಲ್ಲಾ ಉಪವಿಭಾಗಾಧಿಕಾರಿ ಪಿ.ಎಸ್. ಮಂಜುನಾಥ ಅವರು ಒಂದು ಪಕ್ಷದ ಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬಿಜೆಪಿ ಪಕ್ಷದ ಟಿಕೆಟ್ ಆಕಾಂಕ್ಷಿ ಅನಿಲ ಮೆಣಸಿನಕಾಯಿ ದೂರು ನೀಡಿದ್ದರು.
ದೂರಿನ ಆಧಾರದ ಮೇಲೆ ಚುನಾವಣೆ ಆಯೋಗ ಎ.ಸಿ ಯನ್ನು ವರ್ಗ ಮಾಡಿ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೆ ಇಂದು ಗದಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಸಿ. ಪಾಟೀಲ ಗದಗ ನಗರದ ಖಾಸಗಿ ಹೊಟೇಲ್ ನಲ್ಲಿ ಸುದ್ದಿಗೋಷ್ಠಿ ಏರ್ಪಡಿಸಿ ಜಿಲ್ಲಾಡಳಿತದ ವಿರುದ್ಧ ಹರಿಹಾಯ್ದರು. ನೀತಿ ಸಂಹಿತೆ ಕನಿಷ್ಠ ಪರಿಕಲ್ಪನೆ ಪರಿಜ್ಞಾನವಿಲ್ಲದೇ ಗದಗ ಜಿಲ್ಲಾಡಳಿತ ಕಾರ್ಯನಿರ್ವಹಿಸುತ್ತಿದೆ. ನೀತಿ ಸಂಹಿತೆ ಜಾರಿಯಾದ ಬಳಿಕವೇ ಕೆಲ ಅಧಿಕಾರಿಗಳು ಮಧ್ಯರಾತ್ರೀ ಗದಗನ ಹಾಲಿ ಸಚಿವರನ್ನ ಭೇಟಿ ಮಾಡುತ್ತಾರೆಂದ್ರೇ ಹೇಗೆ ಎಂದು ಪ್ರಶ್ನಿಸಿದರು.
ಚುನಾವಣೆ ಸಂದರ್ಭದಲ್ಲಿ ಈ ರೀತಿ ಅಧಿಕಾರಿಗಳು ಶಾಸಕರು ಮತ್ತು ಸಚಿವರನ್ನ ಬೇಟಿಮಾಡುವ ಪದ್ಧತಿಯನ್ನು ಇಟ್ಟುಕೊಳ್ಳಬಾರದು. ಗದಗ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಮನೋಜ್ ಜೈನ್ ನಿಸ್ಪಕ್ಷಪಾತವಾಗಿ ಚುನಾವಣೆ ನಡೆಸಬೇಕು. ಜಿಲ್ಲಾಡಳಿತದ ಸರ್ಕಾರಿ ಕಚೇರಿಗಳಲ್ಲಿ ಸರ್ಕಾರ ಮತ್ತು ಸಚಿವರ ಭಾವಚಿತ್ರ ಅಳವಡಿಕೆ. ಈ ಕುರಿತು ಬಿಜೆಪಿ ಕಾರ್ಯಕರ್ತರು ಮೊಬೈಲ್ ನಲ್ಲಿ ವಿಡಿಯೋ ಫೋಟೋ ತೆಗೆದುಕೊಳ್ಳಲು ಮುಂದಾದ ವೇಳೆ ಅಧಿಕಾರಿಗಳು ತಡೆಯಿಡಿದಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಕುರಿತು ಬಿಜೆಪಿ ಪಕ್ಷ ಕೋರ ಕಮಿಟಿ ಸಭೆ ನಡೆಸಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಲಾಗುವುದು ಎಂದು ಸಿ.ಸಿ.ಪಾಟೀಲ ಹೇಳಿದ್ರು.
ಅಲ್ಲದೇ ಚುನಾವಣೆ ಘೋಷಣೆ ನಂತರ ಗದಗ ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ರಣೋತ್ಸಾಹದಲ್ಲಿ ಒಟ್ಟಾಗಿ ಕೆಲಸ ಮಾಡ್ತಿದೆ. ಗದಗ ಕ್ಷೇತ್ರದಲ್ಲಿ ಒಟ್ಟು 8 ಜನ ಟಿಕೆಟ್ ಆಕಾಂಕ್ಷಿಗಳಿದ್ದು ಒಗ್ಗಟ್ಟಿನ ಪಕ್ಷ ಮಂತ್ರ ಪಠಿಸುತ್ತಿದ್ದೇವೆ. ಯಾರಿಗೇ ಟಿಕೆಟ್ ನೀಡಿದ್ರು ಎಲ್ಲ ಟಿಕೆಟ್ ಆಕಾಂಕ್ಷಿಗಳು ಒಟ್ಟಾಗಿ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಲು ನಿರ್ಧಾರ ಮಾಡಲಾಗಿದೆ ಎಂದರು. ಗದಗ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಬೆಜೆಪಿ ಅಭ್ಯರ್ಥಿಗಳು ಜಯಬೇರಿ ಭಾರಿಸುವ ಮೂಲಕ ಕಾಂಗ್ರೆಸ್ ಮುಕ್ತ ಗದಗ ಜಿಲ್ಲೆಯನ್ನಾಗಿಸಲಾಗುವುದು ಎಂದು ಸಿ.ಸಿ. ಪಾಟೀಲ ಹೇಳಿದರು.