Publish Date: Fri, 31 Dec 2021 (06:38 IST)
Updated Date: Fri, 31 Dec 2021 (07:41 IST)
ಬೆಂಗಳೂರು : ಚಿನ್ನ ಅಂದ್ರೆ ಭಾರತೀಯರಿಗೆ ಕೊಂಚ ಜಾಸ್ತಿಯೇ ಪ್ರೀತಿ.
ಮನೆಯಲ್ಲಿ ಹಬ್ಬ-ಹರಿದಿನಗಳ ಸಾಲು ಬಂದ್ರೆ ಮೊದಲು ಯೋಚಿಸುವುದೇ ಚಿನ್ನಾಭರಣ ಖರೀದಿಸುವ ಕುರಿತು.
ಇಂದು (ಡಿಸೆಂಬರ್ 31, ಶುಕ್ರವಾರ) ಕೂಡ ಚಿನ್ನದ ದರ ಇಳಿಕೆಯಾಗಿದೆ. ಬೆಳ್ಳಿ ದರ ಕೂಡ ಇಳಿಕೆಯತ್ತ ಸಾಗಿದೆ. ನೀವು ಕೂಡಿಟ್ಟ ಹಣದಲ್ಲಿ ಆಭರಣ ಕೊಳ್ಳುವ ಕುರಿತಾದ ಯೋಚನೆ ಇದ್ದರೆ ಇಂದು ಖರೀದಿಸಬಹುದು.
ಪ್ರಮುಖ ನಗರಗಳ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,49,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,500 ರೂಪಾಯಿ ಇಳಿಕೆಯಾಗಿದೆ.
ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,990 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,89,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,700 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 61,600 ರೂಪಾಯಿ ನಿಗದಿಯಾಗಿದೆ.
Ramya kosira
Publish Date: Fri, 31 Dec 2021 (06:38 IST)
Updated Date: Fri, 31 Dec 2021 (07:41 IST)