Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್

ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್
ಬೆಂಗಳೂರು , ಶುಕ್ರವಾರ, 14 ಅಕ್ಟೋಬರ್ 2022 (09:37 IST)
ಬೆಂಗಳೂರು : ಹಾಲು ಉತ್ಪಾದಕರಿಗೆ ಮತ್ತು ರೈತರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ರೈತರ ಪಾಲಿನ ಸಂಜೀವಿನಿಯಾಗಿದ್ದ ಯಶಸ್ವಿನಿ ಯೋಜನೆಯನ್ನು ಮರು ಜಾರಿಗೊಳಿಸಿ ಸರ್ಕಾರ ಇಂದು ಆದೇಶಿಸಿದೆ.

ರೈತರಿಗೆ ವೈದ್ಯಕೀಯ ಸೌಲಭ್ಯ ಒದಗಿಸುವ ಸಲುವಾಗಿ ಯಶಸ್ವಿನಿ ಯೋಜನೆ ರಾಜ್ಯದಲ್ಲಿ 2003 ರಿಂದ ಆರಂಭವಾಗಿತ್ತು. ಆ ಬಳಿಕ 2018ರಲ್ಲಿ ಈ ಯೋಜನೆಯನ್ನು ರದ್ದು ಪಡಿಸಲಾಗಿತ್ತು.

ಇದೀಗ ಮತ್ತೆ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಪರಿಷ್ಕಣೆಯೊಂದಿಗೆ ಯಶಸ್ವಿನಿ ಯೋಜನೆ ಮರು ಜಾರಿಗೊಳಿಸಿ ಆದೇಶ ಹೊರಡಿಸಿದೆ. ಕಳೆದ ಬಜೆಟ್ನಲ್ಲಿ ಯೋಜನೆ ಮರುಜಾರಿ ಬಗ್ಗೆ ಬಿಜೆಪಿ ಸರ್ಕಾರ ಪ್ರಸ್ತಾಪಿಸಿತ್ತು.

ಇದೀಗ ಯಶಸ್ವಿನಿ ಪರಿಷ್ಕೃತ ಯೋಜನೆಗೆ ಬೊಮ್ಮಾಯಿ ಸರ್ಕಾರ 300 ಕೋಟಿ ರೂ. ನಿಗದಿ ಪಡಿಸಿದೆ. ನವೆಂಬರ್ 1 ರಿಂದ ಯೋಜನೆಯಡಿ ಸದಸ್ಯತ್ವ ನೋಂದಣಿ ಆರಂಭವಾಗಲಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ಹಿಜಬ್ ನಲ್ಲಿ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ: ಹೊರಟ್ಟಿ