ಬೆಂಗಳೂರು : 2021-22ನೇ ಸಾಲಿನಲ್ಲಿ ಪ್ರಗತಿ ಕಾಲೋನಿ ಯೋಜನೆಯಡಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪರಿಶಿಷ್ಠ ಜಾತಿಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಕಾಲೋನಿಗಳಲ್ಲಿ ಮೂಲತಭೂತ ಸೌಲಭ್ಯಗಳನ್ನು ಅಭಿವೃದ್ಧಿ ಪಡಿಸಲು 680 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಈ ಮೂಲಕ ಪರಿಶಿಷ್ಠ ಸಮುದಾಯದ ಜನರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.
ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಲ್ ನರಸಿಂಹಮೂರ್ತಿ ನಡವಳಿ ಹೊರಡಿಸಿದ್ದು, 2021-22ನೇ ಸಾಲಿನಲ್ಲಿ ಪ್ರಗತಿ ಕಾಲೋನಿ ಯೋಜನೆಯಡಿ ವಿಧಾಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪರಿಶಿಷ್ಠ ಜಾತಿಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಕಾಲೋನಿಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿ ಪಡಿಸಲು ರಾಜ್ಯ ಅಭಿವೃದ್ಧಿ ಪರಿಷತ್ ಸಭೆಯಲ್ಲಿ ಅನುಮೋದಿಸಲಾಗಿದೆ.
ಈ ಕ್ರಿಯಾಯೋಜನೆಯಡಿಯಲ್ಲಿ ಲೋಕೋಪಯೋಗಿ ಇಲಾಖೆಗೆ ಕಾಮಗಾರಿಗೆ ನಿಗದಿಯಾಗಿರುವ ಒಟ್ಟು 680 ಕೋಟಿ ಅನುದಾನದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಶೇ.40ರಷ್ಟು ಅನುದಾನವನ್ನು ಒಟ್ಟು ರೂ.384 ಕೋಟಿ ಮಂಜೂರಾತಿ ನೀಡಿ, ಮೊದಲ ಕಂತಿನಲ್ಲಿ ರೂ.192 ಕೋಟಿಗಳ ಶೇ.50ರಷ್ಟು ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.