ಬೆಂಗಳೂರು : ಈಗಾಗಲೇ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಸರಕಾರ ರಚನೆ ಮಾಡಿಯಾಯ್ತು. ಆದರೆ ಈ ನಡುವೆ ಬಾಕಿ ಉಳಿದಿರುವ ರಾಜರಾಜೇಶ್ವರಿ ನಗರದ ಚುನಾವಣೆ ಸಂದರ್ಭದಲ್ಲಿ ಇದೀಗ ವಿಘ್ನವೊಂದು ಎದುರಾಗಿದೆ.
ಇದೇ 28ರಂದು ಆರ್‌ಆರ್ ನಗರ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಶಾಸಕ ಮುನಿರತ್ನ ಅವರು ಸ್ಪರ್ಧಿಸುತ್ತಿದ್ದಾರೆ, ಜೆಡಿಎಸ್ ಅಭ್ಯರ್ಥಿಯಾಗಿ ರಾಮಚಂದ್ರ ಅವರು ಕಣಕ್ಕಿಳಿಯುತ್ತಿದ್ದು, ಇವರು ಬಿಜೆಪಿಯಲ್ಲಿ ಟಿಕೆಟ್ ಸಿಗದ ಕಾರಣ ಜೆಡಿಎಸ್‌ಗೆ ಬಂದಿದ್ದರು.
ಆದರೆ ಇದೀಗ ಜೆಡಿಎಸ್‌ಗೆ ಕಾಂಗ್ರೆಸ್ ಬೆಂಬಲಿಸುವ ಯೋಚನೆ ಇತ್ತು. ಆದಕಾರಣ ಮುನಿರತ್ನ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವುದಾಗಿ ಹೇಳಿ, ಕಣದಿಂದ ಹಿಂದೆ ಸರಿಯುವಂತೆ ಕಾಂಗ್ರೆಸ್ ಮುಖಂಡರು ಮನವೊಲಿಸಲು ಯತ್ನಿಸುತ್ತಿದ್ದಾರೆ. ಆದರೆ, ಅವರು ಕ್ಷೇತ್ರದಲ್ಲಿಯೇ ಮುಂದುವರಿಯುವ ಆಶಯ ವ್ಯಕ್ತಪಡಿಸಿದ್ದು, ಆರ್‌ಆರ್ ನಗರ ಕ್ಷೇತ್ರವೇ ಬೇಕೆಂದು ಪಟ್ಟು ಹಿಡಿದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ