ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಬೋರ್ಡಿಂಗ್ ಶಾಲೆಯಲ್ಲಿ ಎಪ್ಪತ್ತೊಂಬತ್ತು ವಿದ್ಯಾರ್ಥಿಗಳು ಮತ್ತು ಮೂವರು ಸಿಬ್ಬಂದಿಗಳಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ಕಳವಳಕಾರಿಯಾಗಿದೆ. ಹಿಮಾಚಲ ಪ್ರದೇಶ ಸರ್ಕಾರ ನೀಡಿದ ಆದೇಶವನ್ನು ಉಲ್ಲೇಖಿಸಿ ವಸತಿ ಶಾಲೆಗಳನ್ನು ಹೊರತುಪಡಿಸಿ ಎಲ್ಲಾ ಶಾಲೆಗಳು ಸೆಪ್ಟೆಂಬರ್ 25 ರವರೆಗೆ ಮುಚ್ಚಲಾಗುತ್ತದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.