ನವದೆಹಲಿ(ಅ.06) : ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಗಗನ್ಕಕೇರುತ್ತಲೇ ಇದೆ. ಗೃಹೋಪಯೋಗಿ ವಸ್ತುಗಳು, ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಕಂಗಾಲಾಗಿ ಹೋಗಿದ್ದಾರೆ.
ಪೆಟ್ರೋಲ್-ಡೀಸೆಲ್ ಹಾಗೂ ಅಡುಗೆ ಎಣ್ಣೆ ಬೆಲೆಯೂ ಹೆಚ್ಚಾಗುತ್ತಿದೆ. ದಿನಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಏರಿಸುತ್ತಿರುವ ಕೇಂದ್ರ ಸರ್ಕಾರ ಗ್ರಾಹಕರಿಗೆ ಬೆಲೆ ಏರಿಕೆಯ ಬರೆ ಹಾಕಿದೆ. ಪ್ರತಿದಿನ ಬಳಸುವ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಈ ತಿಂಗಳು 15 ರೂಪಾಯಿ ಹೆಚ್ಚು ಮಾಡುವ ಮೂಲಕ ಜನಸಾಮಾನ್ಯರಿಗೆ ಶಾಕ್ ನೀಡಿದೆ.
ವಿವಿಧ ನಗರಗಳಲ್ಲಿ ಈ ಹಿಂದೆ ಇದ್ದ ಎಲ್ಪಿಜಿ ಸಿಲಿಂಡರ್ ಬೆಲೆ:
ನವದೆಹಲಿ- 884.50 ರೂ.
ಕೊಲ್ಕತ್ತಾ-911 ರೂ.
ಮುಂಬೈ-884.50 ರೂ.
ಚೆನ್ನೈ-900.50 ರೂ.
ಕಳೆದ ಕೆಲ ದಿನಗಳಿಂದ ದೇಶಾದ್ಯಂತ ಪೆಟ್ರೋಲ್-ಡೀಸೆಲ್ ಬೆಲೆಯೂ ಹೆಚ್ಚಾಗುತ್ತಿದೆ. ಇಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಲೀಟರ್ ಪೆಟ್ರೋಲ್ಗೆ 30 ಪೈಸೆ ಹೆಚ್ಚಾಗಿದ್ದು, 102.94 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಅಂತೆಯೇ ಡೀಸೆಲ್ ಬೆಲೆಯೂ 35 ಪೈಸೆ ಹೆಚ್ಚಳವಾಗಿದ್ದು, ಒಂದು ಲೀಟರ್ ಡೀಸೆಲ್ಗೆ 91.42 ರೂ. ಇದೆ.