Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸರ್ಕಾರದ ಸಹಾಯಧನ ಮೂಲಭೂತ ಹಕ್ಕಲ್ಲ: ಸುಪ್ರೀಂಕೋರ್ಟ್

ಸರ್ಕಾರದ ಸಹಾಯಧನ ಮೂಲಭೂತ ಹಕ್ಕಲ್ಲ: ಸುಪ್ರೀಂಕೋರ್ಟ್
ನವದೆಹಲಿ , ಮಂಗಳವಾರ, 28 ಸೆಪ್ಟಂಬರ್ 2021 (08:51 IST)
ನವದೆಹಲಿ : ಶಿಕ್ಷಣ ಸಂಸ್ಥೆಗಳು ಸರ್ಕಾರದಿಂದ ಸಹಾಯಧನ ಪಡೆಯುವ ಕುರಿತಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಸಹಾಯಧನ ಪಡೆಯುವುದು ಶಿಕ್ಷಣ ಸಂಸ್ಥೆಗಳ ಮೂಲಭೂತ ಹಕ್ಕಲ್ಲ ಎಂದು ಹೇಳಿದೆ.

ಶಿಕ್ಷಣ ಸಂಸ್ಥೆಗಳು ಹೊಂದಿರುವ ಸೌಲಭ್ಯ, ಅವುಗಳ ಕಾರ್ಯವಿಧಾನ ಆಧರಿಸಿ ಸರ್ಕಾರಗಳಿಂದ ನೆರವಿನ ಬಗ್ಗೆ ನಿರ್ಧರಿಸಲಾಗುತ್ತದೆ. ಆದರೆ ಅದನ್ನು ಕಡ್ಡಾಯವಾಗಿ ಪಡೆದುಕೊಳ್ಳುವ ಹಕ್ಕು ಶಿಕ್ಷಣ ಸಂಸ್ಥೆಗಳಿಗೆ ಇಲ್ಲವೆಂದು ಹೇಳಲಾಗಿದೆ.
ನ್ಯಾ. ಎಸ್.ಕೆ. ಕೌಲ್ ಮತ್ತು ನ್ಯಾ. ಕೆ.ಕೆ. ಸುಂದರೇಶ್ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ಪೀಠ, ಸಹಾಯಧನ ಶಿಕ್ಷಣ ಸಂಸ್ಥೆಗಳ ಮೂಲಭೂತ ಹಕ್ಕಲ್ಲ ಎಂದು ತಿಳಿಸಿದೆ. ಮಾನ್ಯತೆ ನೀಡುವ ವಿಚಾರದಲ್ಲಿ ತಾರತಮ್ಯ ಮಾಡುವ ಅಗತ್ಯವಿಲ್ಲ. ಎಲ್ಲ ಶಿಕ್ಷಣ ಸಂಸ್ಥೆಗಳು ಒಂದೇ ಎಂದು ಹೇಳಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

1 ರಿಂದ 5 ನೇ ಕ್ಲಾಸ್ ಆರಂಭಕ್ಕೆ ಮುಹೂರ್ತ ಫಿಕ್ಸ್..?