Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮಲೆನಾಡು-ಕರಾವಳಿಯಲ್ಲಿ ಕಟ್ಟೆಚ್ಚರ!

ರಾಜ್ಯದಲ್ಲಿ ಇಂದು ಮುಂದುವರೆಯಲಿದೆ ಮಳೆ

ಮಲೆನಾಡು-ಕರಾವಳಿಯಲ್ಲಿ ಕಟ್ಟೆಚ್ಚರ!
ಬೆಂಗಳೂರು , ಬುಧವಾರ, 7 ಜುಲೈ 2021 (16:43 IST)
Karnataka Monsoon (2021 ಜುಲೈ 07): ರಾಜ್ಯದಲ್ಲಿ ಮಾನ್ಸೂನ್ ಚುರುಕಾಗಿದ್ದು, ಕಳೆದ ನಾಲ್ಕು ದಿನಗಳಿಂದ ಎಲ್ಲೆಡೆ ಉತ್ತಮ ಮಳೆಯಾಗುತ್ತಿದೆ. ನಿನ್ನೆ ಮಲೆನಾಡು ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗದಲ್ಲೂ ಉತ್ತಮ ಮಳೆಯಾಗಿದೆ ಎಂದು ತಿಳಿದುಬಂದಿದೆ. ಅಲ್ಲದೆ, ಈ ಮಳೆ ಬುಧವಾರವೂ ಮುಂದುವರೆಯಲಿದ್ದು, ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಕಟ್ಟೆಚ್ಚರ ನೀಡಿದೆ. ಅಲ್ಲದೆ ಉತ್ತರ ಒಳನಾಡಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇನ್ನೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಜೆಯ ವೇಳೆಗೆ ಮಳೆಯಾಗಲಿದ್ದು, ರಾತ್ರಿ ಇಡೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹೀಗಾಗಿ ಸಂಜೆ ಮನೆಯಿಂದ ಹೊರಡುವ ಮುನ್ನ ಎಚ್ಚರಿಕೆಯಿಂದ ಇರುವುದು ಉತ್ತಮ
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಇನ್ನೂ ಮಳೆ ಮುಂದುವರೆದಿದ್ದು, ನಾಳೆಯವರೆಗೂ ವರುಣನ ಆರ್ಭಟ ಮುಂದುವರೆಯುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ನಾಲ್ಕೈದು ದಿನಗಳಿಂದ ಮಳೆಯಿಂದ ಹಳದಿ ಅಲರ್ಟ್ ಘೋಷಿಸಲಾಗಿತ್ತು. ಇನ್ನೆರಡು ದಿನ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲೂ ಜುಲೈ 5ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.
ನಾಲ್ಕೈದು ದಿನಗಳಿಂದ ಕಲ್ಯಾಣ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿತ್ತು. ಈ ಭಾಗದಲ್ಲಿ ಇಂದಿನಿಂದ ಮಳೆ ಕೊಂಚ ಕಡಿಮೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿಯೂ ಇನ್ನು ಮೂರು ದಿನ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಉತ್ತರ ಒಳನಾಡಿನಲ್ಲಿ ಇಂದು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇರಲಿದೆ. ನೈಋತ್ಯ ಮುಂಗಾರು ದುರ್ಬಲವಾದ್ದರಿಂದ ಕರಾವಳಿಯಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಮಲೆನಾಡಿನಲ್ಲೂ ಇಂದು ಮಳೆಯಾಗಲಿದ್ದು, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 5ರವರೆಗೆ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕೂಡ ಈ ವಾರಾಂತ್ಯದಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ನೆರೆಯ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ಮಳೆ ಹೆಚ್ಚಾಗುತ್ತಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲೂ ಇಂದಿನಿಂದ ಸೋಮವಾರದವರೆಗೆ ಮಳೆಯಾಗಲಿದೆ.
ಕರ್ನಾಟಕ ಮಾತ್ರವಲ್ಲದೆ, ಒಡಿಶಾ, ಭುವನೇಶ್ವರದಲ್ಲಿ ಒಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಭುವನೇಶ್ವರದ ಅನೇಕ ಕಡೆ ರಸ್ತೆಗಳು ಬಂದ್ ಆಗಿದ್ದು, ನದಿ ತೀರದ ಗ್ರಾಮಗಳಿಗೂ ನೀರು ನುಗ್ಗಿದೆ. ಇಷ್ಟೇ ಅಲ್ಲದೆ, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್ ರಾಜ್ಯಗಳಲ್ಲೂ ಇಂದು ಮಳೆಯಾಗಲಿದೆ.
ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇನ್ನೂ ಮುಂಬೈ, ಮೇಘಾಲಯದಲ್ಲಿ ಮಳೆಯಿಂದ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದ್ದು, ರಸ್ತೆಗಳು ಕೆರೆಗಳಂತಾಗಿವೆ. ಮೇಘಾಲಯದಲ್ಲಿ ಮಳೆಗೆ ಸೇತುವೆಗಳೇ ಕೊಚ್ಚಿಕೊಂಡು ಹೋಗಿವೆ.ಸೂಕ್ತ ತನಿಖೆಗೆ ಆರ್ ಟಿ ಐ ಕಾರ್ಯಕರ್ತನ ಆಗ್ರಹಹಿಮಾಲಯ ಪರ್ವತಶ್ರೇಣಿ, ಸಿಕ್ಕಿಂ, ಬಿಹಾರ, ಅಸ್ಸಾಂ, ಮೇಘಾಲಯ, ಉತ್ತರಾಖಂಡ, ನಾಗಾಲ್ಯಾಂಡ್, ಅರುಣಾಚಲಪ್ರದೇಶ, ಮಿಜೋರಾಂ, ಪಶ್ಚಿಮ ಬಂಗಾಳ, ತಮಿಳುನಾಡು, ತೆಲಂಗಾಣ, ಪುದುಚೆರಿ, ಉತ್ತರ ಪ್ರದೇಶ, ಗೋವಾ, ಕರಾವಳಿ ಕರ್ನಾಟಕ, ಕೇರಳದಲ್ಲಿ ಇಂದು ಮಳೆಯ ಅಬ್ಬರ ಹೆಚ್ಚಾಗಲಿದೆ. ಶನಿವಾರ ಮತ್ತು ಭಾನುವಾರದಂದು ಪಂಜಾಬ್, ಚಂಡೀಗಡ, ಹರಿಯಾಣ, ದೆಹಲಿ ಮತ್ತು ಪಶ್ಚಿಮ ಉತ್ತರ ಪ್ರದೇಶದಾದ್ಯಂತ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ. ಜೊತೆಗೆ ಗಾಳಿಯು ಗಂಟೆಗೆ 40-50 ಕಿ.ಮೀ ವೇಗವಾಗಿಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ6 ಮತ್ತು 7ರಂದು ಮತ್ತೆ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಮಂಗಳವಾರ ಮತ್ತು ಬುಧವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾರ್ಕೆಟ್ನಲ್ಲಿ ಮೂರನೇ ಅಲೆ : ಸ್ವಾಗತ ಕೋರುತ್ತಿರೋ ಜನ,ಎಲ್ಲೆಡೆ ಜನಜಾತ್ರೆ,ವಿಪರೀತ ರಶ್ !