ನವದೆಹಲಿ : ಕೊರೊನಾ ವೈರಸ್ ನಂತರ ದೇಶದಲ್ಲಿ ಮತ್ತೆ ಭೀತಿ ಹುಟ್ಟಿಸಿರುವ ಹೆಚ್3ಎನ್2 ವೈರಸ್ ಮಾರ್ಚ್ ಅಂತ್ಯದ ವೇಳೆಗೆ ಇಳಿಕೆಯಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇಂಟಿಗ್ರೇಟೆಡ್ ಡಿಸೀಸ್ ಸರ್ವೆಲೆನ್ಸ್ ಪ್ರೋಗ್ರಾಂ ನೆಟ್ವರ್ಕ್ ಮೂಲಕ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೆಚ್3ಎನ್2 ವೈರಸ್ ಪರಿಸ್ಥಿತಿಯನ್ನು ಅವಲೋಕಿಸಿ ಈ ಮಾಹಿತಿ ಹಂಚಿಕೊಂಡಿದೆ.
ದೇಶದಲ್ಲಿ ಹೆಚ್3ಎನ್2 ವೈರಸ್ಗೆ ಇಬ್ಬರು ಬಲಿಯಾಗಿದ್ದಾರೆ. ಅಲ್ಲದೇ ಸೋಂಕಿನ ಪ್ರಕರಣಗಳು ಹೆಚ್ಚಾಗಿ ಹರಡುತ್ತಿರುವುದರಿಂದ ಸಹಜವಾಗಿಯೇ ಜನರಲ್ಲಿ ಆತಂಕ ಮೂಡಿದೆ.
15 ವರ್ಷದ ಕೆಳಗಿನ ಮಕ್ಕಳು ಮತ್ತು 65 ವರ್ಷ ದಾಟಿದ ವೃದ್ಧರಿಗೆ ಈ ಸೋಂಕು ಸುಲಭವಾಗಿ ತಗುಲಬಹುದು. ಹೀಗಾಗಿ ಈ ವಯೋಮಾನದವರೆಲ್ಲ ಎಚ್ಚರಿಕೆಯಿಂದ ಇರಬೇಕು ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.