Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧಿಕೃತ ಟ್ವಿಟ್ಟರ್ ಖಾತೆಯಾದ ಸಿಎಂ ಆಫ್ ಕರ್ನಾಟಕ ಕೆಲವು ನಿಮಿಷಗಳ ಕಾಲ ಹ್ಯಾಕ್ ಆಗಿದೆ.
ಇಂದು ಬೆಳಗ್ಗೆ 6 ಗಂಟೆಯಿಂದ 6.18 ರವರೆಗೆ 18 ನಿಮಿಷಗಳ ಕಾಲ ಟ್ವಿಟ್ಟರ್ ಖಾತೆ ಹ್ಯಾಕ್ ಹಾಗಿರುವ ಬಗ್ಗೆ ಟ್ವೀಟಿಗರು ಅನುಮಾನ ವ್ಯಕ್ತಪಡಿಸಿದ್ದರು.
ನೂರಕ್ಕೂ ಹೆಚ್ಚು ಟ್ವೀಟ್ಗಳನ್ನು ಮಾಡಿ ಹ್ಯಾಕ್ ಆಗಿರುವ ಬಗ್ಗೆ ಸಿಎಂ ಟ್ವೀಟ್ ಫಾಲೋವರ್ಸ್ ಮಾಹಿತಿ ಹಂಚಿಕೊಂಡಿದ್ದರು.
ಅಲ್ಲದೇ ಇತ್ತೀಚೆಗೆ ಖಾತೆ ತೆರೆದವರ ಪ್ರೊಫೈಲ್ ಸೇರಿದಂತೆ ಹಲವರನ್ನು ಟ್ಯಾಗ್ ಮಾಡಲಾಗಿತ್ತು ಇದನ್ನು ಗಮನಿಸಿದಾಗ ಹ್ಯಾಕ್ ಆಗಿರುವ ಬಗ್ಗೆ ಅನುಮಾನ ಬಂದಿದೆ.
ಕೆಲ ತಿಂಗಳ ಹಿಂದೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಧಿಕೃತ ಟ್ವಿಟ್ಟರ್ ಖಾತೆ ಸೇರಿದಂತೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ಟ್ವಿಟ್ಟರ್ ಖಾತೆಯು ಹ್ಯಾಕ್ ಆಗಿತ್ತು.