Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ!

ಭಾರೀ ಮಳೆ ಸಾಧ್ಯತೆ  : ರೆಡ್ ಅಲರ್ಟ್ ಘೋಷಣೆ!
ಬೆಂಗಳೂರು , ಮಂಗಳವಾರ, 17 ಮೇ 2022 (09:52 IST)
ಬೆಂಗಳೂರು : ಮೇ 18ರಂದು ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಎಲ್ಲಾ ಜಿಲ್ಲೆಗಳಲ್ಲೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಮೇ 17ಕ್ಕೆ ಆರೆಂಜ್ ಅಲರ್ಟ್ ನೀಡಿದ್ದು, ಮೇ 19 ರಿಂದ 21ರ ವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದರೊಂದಿಗೆ ದಕ್ಷಿಣ ಒಳನಾಡು ಭಾಗದಲ್ಲೂ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. 

ಅಲರ್ಟ್ ಘೋಷಣೆಯ ದಿನಗಳಲ್ಲಿ 100 ಮಿ.ಮೀ ಇಂದ 150 ಮಿ.ಮೀ ಮೇಲ್ಪಟ್ಟು ಮಳೆಯಾಗುವ ಸಾಧ್ಯತೆ ಇದೆ. 3 ದಿನಗಳಲ್ಲಿ ಭಾರೀ ಮಳೆಯಾಗುವ ಹಿನ್ನೆಲೆ ಕರಾವಳಿ ಜಿಲ್ಲೆಗಳಲ್ಲಿ ತುರ್ತು ಮುಂಜಾಗೃತಾ ಕ್ರಮವನ್ನು ಕೈಗೊಳ್ಳಲಾಗಿದೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರ ವಹಿಸಬೇಕು. ಅಲರ್ಟ್ ಘೋಷಿಸಿದ ದಿನಗಳಲ್ಲಿ ಮೀನುಗಾರರು ಕಡ್ಡಾಯವಾಗಿ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯಬಾರದು.

ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ ತೀರಕ್ಕೆ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಚ್ಚರಿಕೆ ನೀಡಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

17 ರ ಯುವತಿ ಮೇಲೆ ‘ಡಿಜಿಟಲ್ ರೇಪ್’ ಮಾಡಿದ 81 ವರ್ಷದ ವೃದ್ಧ