Publish Date: Fri, 21 Jul 2023 (07:18 IST)
Updated Date: Fri, 21 Jul 2023 (10:20 IST)
ಯಾದಗಿರಿ : ಜಿಲ್ಲೆಯಾದ್ಯಂತ ಕಳೆದ ನಾಲ್ಕು ದಿನಗಳಿಂದ ನಿರಂತರ ಮಳೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂದು ಒಂದು ದಿನ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಆಯಾ ತಹಶೀಲ್ದಾರ್ ಮೂಲಕ ರಜೆ ಘೋಷಣೆ ಮಾಡಿ ಆದೇಶಿಸಲಾಗಿದೆ. ಯಾದಗಿರಿ, ಸುರಪುರ, ಹುಣಸಗಿ, ಶಹಾಪುರ, ವಡಗೇರಾ ಹಾಗೂ ಗುರಮಠಕಲ್ ತಾಲೂಕಿನಾದ್ಯಂತ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ. ಇಂದು ಕೂಡ ಹೆಚ್ಚಿನ ಪ್ರಮಾಣದ ಮಳೆ ಬರುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಮುಂಜಾಗ್ರತೆ ವಹಿಸಿ ಪ್ರಾಥಮಿಕ, ಪ್ರೌಢ, ಅನುದಾನಿತ, ಅನುದಾನ ರಹಿತ ಎಲ್ಲಾ ಶಾಲೆಗಳ ರಜೆ ಘೋಷಿಸಲಾಗಿದೆ. ರಜಾ ದಿನ ಅವಧಿ ಸರಿದೂಗಿಸಲು ಭಾನುವಾರ ಶಾಲೆಗಳನ್ನು ಯಥಾ ಪ್ರಕಾರ ನಡೆಸಲು ಸೂಚನೆ ನೀಡಲಾಗಿದೆ.
Ramya kosira
Publish Date: Fri, 21 Jul 2023 (07:18 IST)
Updated Date: Fri, 21 Jul 2023 (10:20 IST)