ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಶೃಂಗೇರಿ, ಮಡಿಕೇರಿ, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಭಾಗಗಳು ತತ್ತರಿಸಿವೆ.
ಶೃಂಗೇರಿ ಶಾರದಾಂಬೆ ದೇಗುಲದಲ್ಲಿ ತುಂಗಾ ನದಿ ಉಕ್ಕಿ ಹರಿಯುತ್ತಿದ್ದು, ದೇವಾಲಯ ಮುಳುಗಡೆ ಭೀತಿ ಎದುರಿಸುತ್ತಿದೆ. ಮಲೆನಾಡಿನಲ್ಲೂ ವರುಣನ ಅಬ್ಬರಕ್ಕೆ ಜನವಸತಿ ಪ್ರದೇಶ, ಬೆಳೆ ಮುಳುಗಡೆಯಾಗಿದೆ.
ಮುನ್ನಚ್ಚರಕೆ ಕ್ರಮವಾಗಿ ಇಂದೂ ಕೂಡಾ ಮಡಿಕೇರಿ, ದಕ್ಷಿಣ ಕನ್ನಡದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ನೆರವು ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿರುವುದಾಗಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಇನ್ನೂ ಎರಡು ದಿನ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.