ಈಶ್ವರಪ್ಪ ರಾಜೀನಾಮೆಗೆ ಹೈಕಮಾಂಡ್ ಸೂಚನೆ!

Webdunia
ಬುಧವಾರ, 13 ಏಪ್ರಿಲ್ 2022 (10:43 IST)
ಬೆಂಗಳೂರು : ಉಡುಪಿ ಲಾಡ್ಜ್ ನಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ಹೆಸರು ಕೇಳಿಬರುತ್ತಿದ್ದಂತೆಯೇ ಬಿಜೆಪಿ ಹೈಕಮಾಂಡ್ ಗರಂ ಆಗಿದ್ದು, ರಾಜೀನಾಮೆ ನೀಡುವಂತೆ ಸೂಚನೆ ನೀಡಿದೆ.

ಹೈಕಮಾಂಡ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಅಲ್ಲದೆ ಹೈಕಮಾಂಡ್ ಸೂಚನೆ ಬೆನ್ನಲ್ಲೇ ಸಚಿವರು ಮೈಸೂರು ಪ್ರವಾಸ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.

ಇಂದು ಮಧ್ಯಾಹ್ನ ಸಿಎಂ ಭೇಟಿಯಾಗಿ ರಾಜೀನಾಮೆ ಸಲ್ಲಿಕೆ ಮಾಡುವ ಸಾಧ್ಯತೆಗಳಿವೆ. ಇತ್ತ ಮಂಗಳೂರು ಪ್ರವಾಸದಲ್ಲಿರುವ ಸಿಎಂ ಮಧ್ಯಾಹ್ನ ರಾಜಧಾನಿಗೆ ವಾಪಸ್ಸಾಗಲಿದ್ದಾರೆ.

ಕಳೆದ ರಾತ್ರಿ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಅವರು ದೆಹಲಿಯಲ್ಲಿ ಅಮಿತ್ ಶಾ ಜೊತೆ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಕುರಿತು ಚರ್ಚೆ ನಡೆಸಿದ್ದಾರೆ. ಪ್ರಕರಣ ರಾಜ್ಯದಲ್ಲಿ ಸರ್ಕಾರ ಮತ್ತು ಪಕ್ಷದ ಮೇಲೆ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಮಾಹಿತಿ ಪಡೆದುಕೊಂಡ ಬಳಿಕ ಹೈಕಮಾಂಡ್ ಈಶ್ವರಪ್ಪ ರಾಜೀನಾಮೆಗೆ ಸೂಚನೆ ಕೊಟ್ಟಿದೆ .

ಇಂದು ಬೆಳಗ್ಗೆ ಹೈಕಮಾಂಡ್ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಮಾತುಕತೆ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮೂಲಕ ಹೈಕಮಾಂಡ್ ಗೆ ವಿವರಣೆ ನೀಡಲಾಗಿದೆ. ಈಶ್ವರಪ್ಪ ಅವರಿಂದ ವಿವರಣೆ ಪಡೆದು ಹೈಕಮಾಂಡ್ ಗೆ ರವಾನೆ ಮಾಡಲಾಗಿದೆ. ಈಶ್ವರಪ್ಪ ವಿವರಣೆಗೆ ಹೈಕಮಾಂಡ್ ಗರಂ ಆಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳುನಾಡು ತಲೆಬಾಗುವುದಿಲ್ಲ: ಎಂಕೆ ಸ್ಟಾಲಿನ್‌

ಸೆಲ್ಫಿ ತೆಗೆಯಲು ಹೋಗಿ ಪ್ರಾಣ ಕಳೆದುಕೊಂಡ ಮೂವರು ಬಾಲಕಿಯರು, ಸಾವಿಗೂ ಮುನ್ನಾದ Video

ಬಿಹಾರದಲ್ಲಿ ದೊಡ್ಡ ನಾಯಕತ್ವ ಬದಲಾವಣೆಗೆ ನಾಂದಿ ಹಾಡಿದ ನಿತೀಶ್ ಕುಮಾರ್‌

ಗುಡಿಸುತ್ತಿದ್ದಾಗ ಮಹಿಳೆ ಮೇಲೆ ಬಿದ್ದ ತುಂಬಿಸಿಟ್ಟ ಸಾಲು ಸಾಲು ಮೂಟೆಗಳು, ಸಹ ಕಾರ್ಮಿಕರ ಸಮಯಪ್ರಜ್ಞೆಗೆ ಮೆಚ್ಚಲೆ ಬೇಕು, Video

ದತ್ತಪೀಠದ ಮಾಣಿಕ್ಯಾಧಾರ ಬಳಿ ಬಾಲಕಿ ಮಿಸ್ಸಿಂಗ್ ಕೇಸ್‌: ಕುತೂಹಲ ಮೂಡಿಸಿದ ಬಾಲಕಿ ತಾಯಿ ಹೇಳಿಕೆ

ಮುಂದಿನ ಸುದ್ದಿ
Show comments