ಬೆಂಗಳೂರು : ರಸ್ತೆ ಗುಂಡಿಗಳ ವಿಚಾರವಾಗಿ ಬಿಬಿಎಂಪಿಯನ್ನು ಮತ್ತೊಮ್ಮೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಕೋರ್ಟ್ ಆದೇಶಗಳು ಕೇವಲ ಆದೇಶಕ್ಕೆ ಮಾತ್ರ ಸೀಮಿತ ಆಗಿವೆ. ಆರು ವರ್ಷಗಳಿಂದ ಬೆಂಗಳೂರಿನ ರಸ್ತೆಗಳು ದುಸ್ಥಿತಿಯಲ್ಲಿಯೇ ಇವೆ. ರಸ್ತೆ ಗುಂಡಿಗಳಿಗೆ ಬಲಿಯಾಗುವವರ ಸಂಖ್ಯೆ ಹೆಚ್ಚಿದೆ. ಆದರೂ ಬಿಬಿಎಂಪಿ ತಲೆಕೆಡಿಸಿಕೊಳ್ಳುತ್ತಿಲ್ಲ.
ಕಳಪೆ ಕಾಮಗಾರಿಗಳು ನಡೆಯುತ್ತಿವೆ. ಬಿಬಿಎಂಪಿ ಅಧಿಕಾರಿಗಳನ್ನು ನಂಬಲು ನಾವು ಸಿದ್ಧ ಇಲ್ಲ. 3ನೇ ಸಂಸ್ಥೆಯಿಂದ ಕಾಮಗಾರಿ ದೃಢೀಕರಣದ ಅಗತ್ಯವಿದೆ.
ಗುಣಮಟ್ಟ ಪರಿಶೀಲನೆಗೆ ಒಂದು ವಾರದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯ ಎಂಜಿನಿಯರ್, ಹಿರಿಯ ಎಂಜಿನಿಯರ್ಗಳನ್ನು ನಿಯೋಜನೆ ಮಾಡಬೇಕು ಎಂದು ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.