Daily Horoscope
✕

ಕರ್ನಾಟಕದಲ್ಲಿ ನಾಳೆಯಿಂದ ಹಿಂಗಾರು

Webdunia
ಬುಧವಾರ, 20 ಅಕ್ಟೋಬರ್ 2021 (09:48 IST)
ಬೆಂಗಳೂರು : ಕರ್ನಾಟಕದಲ್ಲಿ ಸೆಪ್ಟೆಂಬರ್ ತಿಂಗಳ ಅಂತ್ಯದಲ್ಲೇ ಮುಂಗಾರು ಮುಕ್ತಾಯವಾಗಿದೆ. ಆದರೆ, ಚಂಡಮಾರುತ ಮತ್ತು ವಾಯುಭಾರ ಕುಸಿತದಿಂದಾಗಿ ಮಳೆ ಮುಂದುವರೆದಿತ್ತು. ಇದೀಗ 2 ದಿನಗಳಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿದೆ.

ಆದರೆ, ನಾಳೆಯಿಂದ ಕರ್ನಾಟಕಕ್ಕೆ ಹಿಂಗಾರು ಪ್ರವೇಶವಾಗುವ ಹಿನ್ನೆಲೆಯಲ್ಲಿ ಮತ್ತೆ ಮಳೆಯಾಗಲಿದೆ. ಅ. 21ರಿಂದ 23ರವರೆಗೆ ರಾಜ್ಯದಲ್ಲಿ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಕಡಿಮೆಯಾಗಿದ್ದು, ಅ. 21ರಿಂದ ಹಿಂಗಾರು ಮಳೆಯ ಅಬ್ಬರ ಶುರುವಾಗಲಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ರಾಮನಗರ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ 3 ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ. ಹಾಗೇ, ಬಾಗಲಕೋಟೆ, ಬೀದರ್, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಕಲಬುರ್ಗಿ, ಯಾದಗಿರಿಯಲ್ಲಿ ಒಣಹವೆ ಇರಲಿದೆ.
ಅ. 21ರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮತ್ತೆ ಮಳೆ ಪ್ರಮಾಣ ಹೆಚ್ಚಲಿದ್ದು, ಹಿಂಗಾರು ಮಳೆ ಪ್ರವೇಶದ ಲಕ್ಷಣಗಳು ಕಂಡುಬಂದಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನೈಋತ್ಯ ಮುಂಗಾರಿನಿಂದ ಎರಡು ವಾರಗಳಿಂದ ರಾಜ್ಯದಲ್ಲಿ ಭಾರೀ ಮಳೆಯಾಗಿತ್ತು. ಬೆಂಗಳೂರಿನಲ್ಲಿ ನಿನ್ನೆ ಕೂಡ ಮಳೆಯಾಗಿದ್ದು, ಹಲವೆಡೆ ಸುಮಾರು 2 ಗಂಟೆ ಮಳೆ ಸುರಿದಿದೆ. ಇಂದು ಕೂಡ ಬೆಂಗಳೂರಿನಲ್ಲಿ ಮಳೆ ಮುಂದುವರೆಯುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಡ್ಜ್ ಏನೋ ಹೊರಗೆ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದರೆ ಎರಡು ಕುಟುಂಬದವರು ರಸ್ತೆಯಲ್ಲಿ ಹೀಗಾಡೋದಾ Video

ಭಾರತದಲ್ಲಿ ಜೆನ್ ಜಿ ಹೋರಾಟಕ್ಕೆ ನಮಗೆ ಬಾಂಗ್ಲಾದೇಶವೇ ಸ್ಪೂರ್ತಿ, ಅವರಿಗೆ ಥ್ಯಾಂಕ್ಸ್ ಎಂದ ನೇಹಾ ಬೋರಾ

ಪ್ರೀತಿಸಿ ಮದುವೆಗೆ ಕೈ ಕೊಟ್ಳು… ರಸ್ತೆಯಲ್ಲೇ ಜುಟ್ಟು ಹಿಡಿದು ಕಿತ್ತಾಡಿದ ಯುವ ಜೋಡಿ: ಕೊನೆಗೆ ಏನಾಯ್ತು ನೋಡಿ Video

ಎರಡು ಕಡೆ ವೋಟ್ ಇದೆ, ಒಂದು ಕಡೆ ಡಿಲೀಟ್ ಮಾಡಿದ್ದಾರೆ, ಅದಕ್ಕೇ ಪ್ರತಿಭಟನೆಗೆ ಬಂದೆ: ಈ ವ್ಯಕ್ತಿಯ ಮಾತಿಗೆ ಏನನ್ನಬೇಕು Video

ಬೀದಿ ನಾಯಿಗೂ ಜೀವನವಿಲ್ವಾ… ಸುಮ್ಮನೆ ಮಲಗಿದ್ದ ನಾಯಿಯನ್ನು ರಾಡ್ ನಿಂದ ಹೊಡೆದು ಕೊಂದ ಪಾಪಿ: ಸಿಸಿಟಿವಿ Video viral

ಮುಂದಿನ ಸುದ್ದಿ
Show comments