ಮಂಗಳೂರು : ಕರ್ನಾಟಕದಲ್ಲಿ ಹಲವೆಡೆ ಭಾರೀ ಮಳೆಯಾಗುತ್ತಿದೆ. ಹಾಗೇ ಮುಂದಿನ 24 ಗಂಟೆಗಳಲ್ಲಿ ಸಹ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಹೀಗಾಗಿ ಇಂದು (ಜುಲೈ 26) ಕರಾವಳಿ ಜಿಲ್ಲೆಗಳು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ. ಹಾಗಾದ್ರೆ, ಯಾವೆಲ್ಲ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿಸಲಾಗಿದೆ .
ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿರುವ ಕಾರಣ ಮುನ್ನೆಚ್ಚರಿಕೆ ಹಾಗೂ ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ, ಶಾಲಾ ಮತ್ತು ಕಾಲೇಜುಗಳಿಗೆ ಕಳೆದ ಮೂರು ದಿನಗಳಿಂದ ರಜೆ ನೀಡಲಾಗಿದೆ.
ಇಂದು ಸಹ ರಜೆ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಖಾಸಗಿ ವಿದ್ಯಾಸಂಸ್ಥೆಗಳಿಗೂ ರಜೆ ಘೋಷಿಸಿದ್ದು, ಕಾಲೇಜಿಗೆ ಬರಲಾಗದ ಪದವಿ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿ ನಡೆಸುವಂತೆ ಸೂಚನೆ ನೀಡಿದ್ದಾರೆ. ಇದರ ಜೊತೆಗೆ, ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವಂತೆ ಸೂಚನೆ ನೀಡಿದ್ದಾರೆ.