Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ರಾಜ್ಯದಲ್ಲಿ ಇಂದು ಓಮಿಕ್ರಾನ್ ಸ್ಫೋಟಗೊಂಡಿದೆ. 299 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 2 ಮರಣ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ ಇಂದು ಒಟ್ಟು 1,60,680 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,27,098 ಸ್ಯಾಂಪಲ್ (ಆರ್ಟಿಪಿಸಿಆರ್ 1,05,021 + 22,077 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 210, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 1, ಚಿತ್ರದುರ್ಗ 0, ದಕ್ಷಿಣ ಕನ್ನಡ 12, ದಾವಣಗೆರೆ 0, ಧಾರವಾಡ 8, ಗದಗ 0, ಹಾಸನ 3, ಹಾವೇರಿ 1, ಕಲಬುರಗಿ 0, ಕೊಡಗು 8, ಕೋಲಾರ 8, ಕೊಪ್ಪಳ 0, ಮಂಡ್ಯ 5, ಮೈಸೂರು 7, ರಾಯಚೂರು 0, ರಾಮನಗರ 0, ಶಿವಮೊಗ್ಗ 5, ತುಮಕೂರು 3, ಉಡುಪಿ 4, ಉತ್ತರ ಕನ್ನಡ 13, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.