Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ರಾಜ್ಯದಲ್ಲಿ ಇಂದು ಓಮಿಕ್ರಾನ್ ಸ್ಫೋಟಗೊಂಡಿದೆ. ಒಂದೇ ದಿನ 12 ಕೇಸ್ ಪತ್ತೆಯಾಗಿದೆ.
ಇದರೊಂದಿಗೆ 299 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 2 ಮರಣ ಪ್ರಕರಣ ದಾಖಲಾಗಿದೆ.
ಇಂದು ಬೆಂಗಳೂರು ಒಂದರಲ್ಲೇ 10 ಓಮಿಕ್ರಾನ್ ಕೇಸ್ ವರದಿಯಾಗಿದ್ದು, ಮೈಸೂರು ಮತ್ತು ಮಂಗಳೂರಿನಲ್ಲಿ ತಲಾ ಒಂದು ಪ್ರಕರಣ ಸೇರಿ 12 ಕೇಸ್ ದಾಖಲಾಗಿದೆ. ಈ ಮೂಲಕ ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳ ಒಟ್ಟು ಸಂಖ್ಯೆ 31ಕ್ಕೇರಿದೆ. ಒಟ್ಟು 318 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 7,117 ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 30,03,564 ಮಂದಿಗೆ ಕೊರೊನಾ ಬಂದಿದೆ. 29,58,117 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.66 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.23 ರಷ್ಟಿದೆ. ಬೆಂಗಳೂರಿನಲ್ಲಿ 210 ಪಾಸಿಟಿವ್ ಕೇಸ್ ಮತ್ತು 1 ಮರಣ ಪ್ರಕರಣ ದಾಖಲಾಗಿದೆ.